Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ
ವಿಶೇಷ ಸಂದರ್ಭ ಇದ್ದರೆ ಸಡಿಲಿಕೆಗೆ ಸರಕಾರ ಮನವಿ ಮಾಡಬಹುದು: ಮು. ಚು. ಅಧಿಕಾರಿ
Team Udayavani, May 9, 2024, 12:15 AM IST
ಬೆಂಗಳೂರು: ರಾಜ್ಯದಲ್ಲಿ 2 ಹಂತಗಳ ಲೋಕಸಭಾ ಚುನಾವಣೆ ಮುಗಿಯಿತು. ಇನ್ನು ರಾಜ್ಯದ ಮಟ್ಟಿಗೆ ಚುನಾವಣ ಮಾದರಿ ನೀತಿ ಸಂಹಿತೆ ಸಡಿಲಿಕೆ ಆಗುತ್ತದಾ ಎಂಬ ಪ್ರಶ್ನೆಗೆ ಚುನಾವಣ ಆಯೋಗ ಸ್ಪಷ್ಟವಾಗಿ “ಇಲ್ಲ’ ಎಂದಿದೆ. ಈ ಹಿಂದೆ ನಿರ್ಧರಿಸಿದಂತೆ ಜೂ.6ರ ವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ.
ಉದಯವಾಣಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ “ಮತದಾನ ಮುಗಿದ ಬಳಿಕವೂ ನೀತಿ ಸಂಹಿತೆ ಜಾರಿಯಲ್ಲಿರಬೇಕು ಅನ್ನುವುದು ನ್ಯಾಯವೇ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ನ್ಯಾಯ, ಅನ್ಯಾಯದ ಪ್ರಶ್ನೆ ಅಲ್ಲ. ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದಾಗ ಕೇಂದ್ರ ಚುನಾವಣ ಆಯೋಗ ಸ್ಪಷ್ಟವಾಗಿ ಹೇಳಿತ್ತು. ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದ ಜೂನ್ 6ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು. ಹಾಗಿದ್ದಾಗ ರಾಜ್ಯದಲ್ಲಿ ಮತದಾನ ಮುಗಿದಿದೆ ಎಂದು ನೀತಿ ಸಂಹಿತೆ ಸಡಿಲಿಕೆ ಮಾಡಲು ಆಗುವುದಿಲ್ಲ ಎಂದರು.
ಅಲ್ಲದೆ, ಏನಾದರೂ ವಿಶೇಷ ಸಂದರ್ಭಗಳಿದ್ದಾಗ ರಾಜ್ಯ ಸರಕಾರ ಚುನಾವಣ ಆಯೋಗಕ್ಕೆ ಮನವಿ ಮಾಡಿಕೊಳ್ಳಬಹುದಾದರೂ ಆಯೋಗದ ತೀರ್ಮಾನವೇ ಅಂತಿಮ. ಆದರೆ ದೈನಂದಿನ ಆಡಳಿತಾತ್ಮಕ ಕೆಲಸಗಳಿಗೆ ಯಾವುದೇ ಧಕ್ಕೆ ಬರುವುದಿಲ್ಲ. ಕಾಲಬದ್ಧವಾಗಿ ಆಗಬೇಕಾದ ಮತ್ತು ತುರ್ತು ಕೆಲಸಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಕುಡಿಯುವ ನೀರು, ಬಿತ್ತನೆ ಬೀಜ-ಗೊಬ್ಬರ ಖರೀದಿ, ಬರಗಾಲ ನಿರ್ವಹಣೆ ಮತ್ತಿತರ ಕೆಲಸಗಳಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಸಲ್ಲಿಸುವ ಪ್ರಸ್ತಾವನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಇದೇ ಮೇ 20ಕ್ಕೆ 1 ವರ್ಷ ಪೂರೈಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀತಿ ಸಂಹಿತೆಯಿಂದಾಗಿ ರಾಜ್ಯದಲ್ಲಿ ಮತದಾನ ಮುಗಿದರೂ ಅಭಿವೃದ್ಧಿ ಸಹಿತ ವಿವಿಧ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ 1 ತಿಂಗಳು ಕಾಯಬೇಕಾಗುತ್ತದೆ. ಕೆಲ ಅತಿ ಆವಶ್ಯಕ ಕೆಲಸಗಳನ್ನು ಹೊರತುಪಡಿಸಿದರೆ ಇತರ ಯೋಜನೆ, ಕಾಮಗಾರಿಗಳನ್ನು ಈ ಅವಧಿಯಲ್ಲಿ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ರಾಜ್ಯದಲ್ಲಿ ಮತದಾನ ಮುಗಿಯುತ್ತಿದ್ದಂತೆ ನೀತಿ ಸಂಹಿತೆ ಸಡಿಲಿಸುವಂತೆ ಚುನಾವಣ ಆಯೋಗವನ್ನು ಒತ್ತಾಯಿಸುತ್ತೇವೆ. ಈ ಕುರಿತು ಆಯೋಗಕ್ಕೆ ಪತ್ರ ಬರೆಯುತ್ತೇವೆ ಎಂದು ಇತ್ತೀಚೆಗೆ ಉದಯವಾಣಿಗೆ ನೀಡಿದ ಸಂದರ್ಶನ ತಿಳಿಸಿದ್ದರು.
ಅದಕ್ಕೂ ಮುನ್ನ ಎ.19ರ ಮೊದಲ ಹಂತದಲ್ಲೇ ಮತದಾನ ಮುಗಿದ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಪಕ್ಷವೂ ತನ್ನ ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ ಮಾಡುವಂತೆ ಚುನಾವಣ ಆಯೋಗವನ್ನು ಒತ್ತಾಯಿಸಿತ್ತು ಎಂಬುದು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.