Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ
Team Udayavani, May 9, 2024, 12:48 AM IST
ಮಂಗಳೂರು: ನಗರದ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳೆಯರ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ನಿರಂತರವಾಗಿ ಮೊಬೈಲ್ ರಿಂಗಣಿಸುತ್ತಿತ್ತು. ಇದರಿಂದ ಅನುಮಾನಗೊಂಡ ಕಾಲೇಜಿನ ಭದ್ರತಾ ಸಿಬಂದಿ ಹೋಗಿ ನೋಡಿದಾಗ ಮೊಬೈಲ್ ಸಿಕ್ಕಿತು. ಕೂಡಲೇ ಪೊಲೀಸರಿಗೆ ತಿಳಿಸಲಾಯಿತು. ಪೊಲೀಸರು ಸಿಸಿ ಕೆಮರಾ ಪರಿಶೀಲಿಸಿದರು. ಆಗ ಬಾಲಕನ ಚಹರೆ ತಿಳಿಯಿತು.
ಚಿಕಿತ್ಸೆಗೆ ಬರುತ್ತಿದ್ದ
ಆರೋಪಿ ಬಾಲಕ ಈ ಹಿಂದೆ ಹಲವು ಬಾರಿ ಹಲ್ಲಿನ ಚಿಕಿತ್ಸೆಗೊಂದು ತಾಯಿಯ ಜತೆಗೆ ಕಾಲೇಜಿನ ಡೆಂಟಲ್ ವಿಭಾಗಕ್ಕೆ ಬರುತ್ತಿದ್ದ. ಸೋಮವಾರ ಒಬ್ಬನೇ ಬಂದಿದ್ದ. ಆತ ಕಾಪು ಮೂಲದವನಾಗಿದ್ದು ವಿದ್ಯಾರ್ಥಿಯಾಗಿದ್ದಾನೆ. ಬಾಲಕ (17)ನನ್ನು ಪೊಲೀಸರು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಅದರಲ್ಲಿ ಯಾವುದೇ ವೀಡಿಯೋ, ಪೊಟೋ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.