Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
Team Udayavani, May 9, 2024, 4:53 PM IST
ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಆರೋಪಿಸಿ ಗುರುವಾರ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಅವರು ಖಳನಾಯಕರಾಗಿದ್ದಾರೆ ಎಂದು ಅರೋಪಿಸಿದ ಕಾರ್ಯಕರ್ತರು, ಕೂಡಲೇ ಶಿವಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ ಹಾಗೂ ರಣದೀಪಸಿಂಗ್ ಸುರ್ಜೇವಾಲಾ ಅವರು ಸಿಡಿ ಕಾರ್ಖಾನೆ ಹೊಂದಿದ್ದಾರೆ. ಪ್ರಕರಣದ ಹಿಂದೆ ರಾಜ್ಯ ಸರಕಾರದ ಕೈವಾಡವಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸರಕಾರವನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರ ಒತ್ತಾಯಿಸಿದರು.
ಪ್ರಜ್ವಲ್ ರೇವಣ್ಣರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ರಾಜ್ಯ ಸರಕಾರದ ಕೈಗೊಂಬೆಯಾಗಿದೆ. ಈ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಜೈಲಿಗೆ ಕಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.