Santro Ravi: 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು
Team Udayavani, May 10, 2024, 6:50 AM IST
ಮೈಸೂರು: ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಂಧಿತನಾಗಿ 14 ತಿಂಗಳ ಕಾಲ ಜೈಲಿನಲ್ಲಿದ್ದ ರವಿ, ಆರೋಗ್ಯ ಸಮಸ್ಯೆ ನಿಮಿತ್ತ ಜಾಮೀನು ನೀಡಬೇಕು ಎಂದು ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಜಾಮೀನು ಮಂಜೂರು ಮಾಡಿದ್ದಾರೆ.
ಹಲವು ಪ್ರಕರಣಗಳಲ್ಲಿ ರಾಜ್ಯ ಸರಕಾರಕ್ಕೆ ತಲೆನೋವಾಗಿದ್ದ ಸ್ಯಾಂಟ್ರೋ ರವಿಯನ್ನು ಕಳೆದ ವರ್ಷ ಗುಜರಾತ್ನಿಂದ ಬಂಧಿಸಿ ಕರೆತರಲಾಗಿತ್ತು. ಈ ಮೊದಲು ಆರೋಪಿ ಹೈಕೋರ್ಟ್ ಹಾಗೂ ಬಳಿಕ ಸುಪ್ರೀಂಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದರೂ ತಿರಸ್ಕೃತವಾಗಿತ್ತು.
ಸ್ಯಾಂಟ್ರೋ ರವಿ ವಿರುದ್ಧ ಕಳೆದ ವರ್ಷ ಮೈಸೂರಿನಲ್ಲಿ ವೇಶ್ಯಾವಾಟಿಕೆ, ಅತ್ಯಾಚಾರ ಸಹಿತ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿತ್ತು. ಬಂಧನದ ವೇಳೆ ಆತನಿಂದ ವಶಪಡಿಸಿಕೊಂಡ ಮೊಬೈಲ್, ಇತರ ದಾಖಲೆಗಳು ಆರೋಪಿ ಜತೆಗೆ ಸಚಿವರು, ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಸಂಪರ್ಕ ಇರುವುದು ಬಹಿರಂಗಗೊಂಡು ಮುಜುಗರ ಎದುರಿಸುವಂತಾಗಿತ್ತು. ಆಗ ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.