![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 10, 2024, 6:05 PM IST
ದಾಂಡೇಲಿ : ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರು ಮತ್ತು ಹಳಿಯಾಳದಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನವೊಂದು ದಾಂಡೇಲಿ ತಾಲೂಕಿನ ಕರ್ಕಾ ಆಲೂರು ಮಧ್ಯ ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹಳಿಯಾಳ ತಾಲೂಕಿನ ಮದ್ನಳ್ಳಿ ದುಸಗಿ ನಿವಾಸಿ 28 ವರ್ಷ ವಯಸ್ಸಿನ ಸುನೀಲ್ ಬೋಕ್ನೆಕರ್ ಎಂಬತಾನೇ ಗಂಭೀರ ಗಾಯಗೊಂಡ ದ್ವಿಚಕ್ರವಾಹನ ಸವಾರನಾಗಿದ್ದಾನೆ.
ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸವಾರ ಸುನೀಲ್ ಬೋಕ್ನೆಕರ್ ಈತನಿಗೆ ಗಂಭೀರ ಗಾಯವಾಗಿದೆ.
ಈ ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
ಗಂಭೀರ ಗಾಯಗೊಂಡ ಸುನೀಲ್ ಬೋಕ್ನೆಕರ್ ಈತನನ್ನು ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.