JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
ಶೀಘ್ರವೇ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ ಸಭೆ
Team Udayavani, May 10, 2024, 8:38 PM IST
ಹುಬ್ಬಳ್ಳಿ: ಚುನಾವಣಾ ನಂತರ ಜೆಡಿಎಸ್ ಜತೆ ಮೈತ್ರಿ ಇರಬೇಕೋ, ಬೇಡವೋ ಎಂಬುವುದನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಚುನಾವಣೆ ಅವಲೋಕನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಯಾವುದೇ ನಕಾರಾತ್ಮಕ ಅಂಶಗಳು ಮೂಡಿಲ್ಲ. ಶೀಘ್ರವೇ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯುವ ಚುನಾವಣೆ ಅವಲೋಕನ ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಮೈತ್ರಿ ಮುಂದುವರಿಯಬೇಕೋ, ಬೇಡವೋ ಎಂಬುವುದನ್ನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ತಮ್ಮ ರಾಜಕೀಯಕ್ಕಾಗಿ ವಿಡಿಯೋಗಳನ್ನು ಹರಿಬಿಟ್ಟು ಮಹಿಳೆಯರ ಮಾನ ತೆಗೆದಿರುವವರ ವಿರುದ್ಧ ಕ್ರಮವಾಗಬೇಕು. ಪೆನ್‌ಡ್ರೈವ್ ಹೊರ ತಂದವರು ಯಾರು, ಇದರ ಹಿಂದೆ ಯಾರಿದ್ದಾರೆ ಎಂಬುದು ಕೂಡ ತನಿಖೆಯಾಗಬೇಕು. ಆದರೆ ರಾಜ್ಯ ಸರ್ಕಾರದಿಂದ ಸರಿಯಾಗಿ ತನಿಖೆಯಾಗುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.