Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು
Team Udayavani, May 11, 2024, 1:06 PM IST
ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಅಣಕನೂರು ಬಳಿ ಇರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಇಬ್ಬರು ಪೊಲೀಸ್ ಪೇದೆಗಳು ತಮ್ಮ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ.
ತಮ್ಮನ್ನು ಪೊಲೀಸ್ ವರಿಷ್ಟಾಧಿಕಾರಿಗಳು ನಮ್ಮದ್ದಲ್ಲದ ತಪ್ಪಿಗೆ ನಮ್ಮನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ, ನಮಗೆ ಪೊಲೀಸ್ ವರಿಷ್ಟಾಧಿಕಾರಿಗಳಿಂದ ಕಿರುಕುಳ ಆನ್ಯಾಯ ಆಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಧರಣಿ ನಡೆಸುತ್ತಿದ್ದಾರೆ.
ಅಮಾನತ್ತು ಮಾಡಿ ಆರು ತಿಂಗಳು ಕಳೆದಿದೆ. ಅಮಾನತ್ತು ಆದೇಶ ಹಿಂಪಡೆದಿಲ್ಲ. ನಮಗೆ ನ್ಯಾಯ ಒದಗಿಸಬೇಕು. ನಮ್ಮ ಮೇಲಿನ ಆರೋಪ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಪೊಲೀಸ್ ಕಾನ್ಸ್ ಟೇಬಲ್ ಗಳು ಧರಣಿ ಕೂತಿದ್ದಾರೆ.
ತಮ್ಮ ವಿರುದ್ದ ಪೊಲೀಸ್ ಪೇದೆಗಳು ಧರಣಿ ನಡೆಸುತ್ತಿರುವ ಕುರಿತು ಉದಯವಾಣಿ ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ್, ಧರಣಿ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. ಏನಾದರೂ ಅವರ ಅಹವಾಲು ಇದ್ದರೆ ಇಲಾಖೆಗೆ ಸಲ್ಲಿಸಲಿ. ಅಥವ ನನ್ನ ಮೇಲಿನ ಅಧಿಕಾರಿಗಳಿಗೆ ಕೊಡಲಿ ನಿಯಮನುಸಾರ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ಅದು ಬಿಟ್ಟು ಈ ರೀತಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.