ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ


Team Udayavani, May 11, 2024, 5:18 PM IST

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

■ ಉದಯವಾಣಿ ಸಮಾಚಾರ
ಚಿತ್ರದುರ್ಗ: ಸದ್ಯ ನೂತನ ವಟು ಸ್ವೀಕರಿಸಲಾಗಿದ್ದು, ಅವರ ಶಿಕ್ಷಣದ ಜವಾಬ್ದಾರಿ ಮಠದಿಂದ ವಹಿಸಿಕೊಳ್ಳಲಾಗುತ್ತದೆ. ಆದಿಚುಂಚನಗಿರಿ ಗುರುಕುಲದಲ್ಲಿ ಅಧ್ಯಯನಕ್ಕೆ ಕಳಿಸುತ್ತೇವೆ. ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನ ಹಾಗೂ ಆಶೀರ್ವಾದ ನೀಡುತ್ತಾರೆ. ಉನ್ನತ ಶಿಕ್ಷಣದ ನಂತರ ಮಠಕ್ಕೆ ಉತ್ತರಾಧಿಕಾರಿ ಆಯ್ಕೆಯನ್ನು ಟ್ರಸ್ಟ್‌ ಹಾಗೂ ಸಮಾಜದ ಹಿರಿಯರು ನೆರವೇರಿಸಲಿದ್ದಾರೆ. ಅದು ಅವರ ಜವಾಬ್ದಾರಿ ಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ವಟು ಸ್ವೀಕಾರ ಸಮಾರಂಭದ ನಂತರ ಮಾತನಾಡಿದ ಶ್ರೀಗಳು, ವಿಶ್ವಗುರು ಬಸವಣ್ಣನವರ ಜಯಂತಿಯಂದು ಸರ್ವ ಸಮುದಾಯಗಳಿಗೆ ಸಮಾನತೆ, ಶೋಷಿತ ಸಮುದಾಯಗಳಿಗೆ ಧ್ವನಿ ಕೊಟ್ಟವರ ಜಯಂತಿ ಸಂದರ್ಭದಲ್ಲಿ ವಟು ಸ್ವೀಕಾರ ಮಾಡಲಾಗಿದೆ. ಮಾದಾರ ಚನ್ನಯ್ಯ ಗುರುಪೀಠದ ಎರಡು ದಶಕಗಳ ನಡಿಗೆಯಲ್ಲಿ ಇದೊಂದು ಮಹತ್ತರ ಹಾಗೂ ಸ್ಮರಣೀಯ ದಿನವಾಗಿದೆ. ಜಯಬಸವ ದೇವರು ಎನ್ನುವ ಹೆಸರಿನಲ್ಲಿ ವಟು ಸ್ವೀಕಾರ ಮಾಡಿದ್ದೇವೆ ಎಂದರು.

ನಾವು ದೀಕ್ಷೆ ಪಡೆದ ಮುರುಘಾ ಮಠ ಹಾಗೂ ಬಸವ ತತ್ವ ಪರಂಪರೆ ಮುಂದುವರೆಸಿಕೊಂಡು, ಉಳಿಸಿಕೊಂಡು ಹೋಗಲಿದ್ದೇವೆ. ಕೇತಿಕವಾಗಿ ವಟು ಸ್ವೀಕಾರ ಮಾಡಲಾಗಿದೆ. ಅವರ ಶಿಕ್ಷಣ ನಂತರ ಸಮಾಜದ ಮುಖಂಡರಾದ ಗೋವಿಂದ ಕಾರಜೋಳ, ಕೆ.ಎಚ್‌. ಮುನಿಯಪ್ಪ, ಬಿ.ಎನ್‌. ಚಂದ್ರಪ್ಪ ಸೇರಿದಂತೆ ನಾಡಿನಾದ್ಯಂತ ಇರುವ ಹಿರಿಯರು ಉತ್ತರಾಧಿಕಾರಿ ಆಯ್ಕೆ ಮಾಡಲಿದ್ದಾರೆ.ಈ ಜವಾಬ್ದಾರಿಯನ್ನು ಅವರಿಗೆ ಬಿಡುತ್ತೇವೆ ಎಂದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕನಕ ಗುರುಪೀಠದ ಈಶ್ವರನಾಂದಪುರಿ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಮಾತಂಗಮುನಿ ಮಠದ ಮಾತಂಗಮುನಿ ಸ್ವಾಮೀಜಿ, ಲಂಬಾಣಿ
ಗುರುಪೀಠದ ನಂದ ಮಸಂದ ಸ್ವಾಮೀಜಿ, ಕೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ, ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ,
ರಾಣಿಬೆನ್ನೂರಿನ ಗಜದಂಡ ಸ್ವಾಮೀಜಿ, ಸಿದ್ಧಾರೂಢ ಆಶ್ರಮದ ಜಯದೇವ ಸ್ವಾಮೀಜಿ, ನಿರಂಜನಾನಂದ ಸ್ವಾಮೀಜಿ, ಪೂರ್ಣಾನಂದ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ, ಸತ್ಯಕ್ಕ, ಜಯದೇವಿ ತಾಯಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.