Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

ಕಡೇಮನುಗನಹಳ್ಳಿಯಲ್ಲಿ ಮೂರು ದಿನಗಳಿಂದ ಕಲ್ಮಶಯುಕ್ತ ನೀರು ಪೂರೈಕೆ

Team Udayavani, May 11, 2024, 6:27 PM IST

1-wqewqewq

ಹುಣಸೂರು: ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡು 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.

ಕಳೆದ ಮೂರ‍್ನಾಲ್ಕು ದಿನಗಳ ಹಿಂದೆ ಕಡೆಮನುಗನಹಳ್ಳಿ ಗ್ರಾ.ಪಂ.ವತಿಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲುಷಿತ ನೀರು ಸೇರಿಕೊಂಡಿದ್ದು, ಆ ನೀರನ್ನೇ ಗ್ರಾಮಸ್ಥರು ಅಡುಗೆಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆ.

ಮೊದಲ ದಿನವೇ 50 ಕ್ಕೂ ಹೆಚ್ಚು ಮಂದಿಗೆ ಬೇಧಿ ಕಾಣಿಸಿಕೊಂಡು ಹುಣಸೂರು,ಮೈಸೂರು, ಪಿರಿಯಾಪಟ್ಟಣ ಹಾಗೂ ಹನಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರಾದರೂ ದಿನೇ ದಿನೇ ಹಲವರಲ್ಲಿ ಬೇಧಿ ಕಾಣಿಸಿಕೊಂಡು ಸುಸ್ತು, ಅಸ್ವಸ್ಥಗೊಳ್ಳುತ್ತಲೇ ಇದ್ದಾರೆ. ಈ ಪೈಕಿ ತೀವ್ರ ನಿತ್ರಾಣಗೊಂಡಿದ್ದ ಇಬ್ಬರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನಗೋಡಿನ ಸರಕಾರಿ ಆಸ್ಪತ್ರೆಯಲ್ಲಿ ಭಾರತಿ, ಅಮಾಸೇಗೌಡ, ಶಿವಣ್ಣ, ಆನಂದ, ವಿನು, ಸಪ್ರೀತ್, ಬಲರಾಮ, ಶೀಲಾ, ಶಿವಣ್ಣ, ಶಿವು, ಪಾರ್ವತಮ್ಮ, ಪ್ರಶಾಂತ್, ಭವ್ಯ, ವಸಂತ, ಪ್ರಭಾವತಿ, ಶಾರದಮ್ಮ, ಕೃಷ್ಣೇಗೌಡ, ಪುಷ್ಪಲತಾ, ಮಂಗಳಮ್ಮ, ಪದ್ಮಮ್ಮ, ರಾಜೇಗೌಡ, ನವೀನ, ಕುಮಾರ್, ಶರತ್, ಪ್ರೀತಮ್, ಶಶಿಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರಿಗೆ ಗ್ರಾಮದಲ್ಲೇ ವೈದ್ಯರ ತಂಡ ಚಿಕಿತ್ಸೆ ನಿಡಿ ನಿಗಾ ಇರಿಸಿದ್ದಾರೆ.
ಕೆಲವರು ಮನೆಗೆ ತೆರಳಿದ್ದಾರೆ. ಈ ಪೈಕಿ ಶಿವಣ್ಣ, ಭಾರತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹನಗೋಡು ಆಸ್ಪತ್ರೆ ವೈದ್ಯಾಧಿಕಾರಿ ಡಾ ಜೋಗೇಂದ್ರನಾಥ್ ಚಿಕಿತ್ಸೆ ನೀಡುತ್ತಿದ್ದಾರೆ.

ಹುಣಸೂರು ಆಸ್ಪತ್ರೆಯಲ್ಲಿ ವಸಂತ, ಶೀಲಾ, ಜಯಮ್ಮ, ಪಿರಿಯಾಪಟ್ಟಣ ಅಸ್ಪತ್ರೆಯಲ್ಲಿ ನೀರು ಗಂಟಿ ಉಮೇಶ್ ಚಿಕಿತ್ಸೆ ಪಡೆದರೆ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಮಾ, ಪ್ರಭಾವತಿ ದಾಖಲಾಗಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದಲ್ಲಿ ದೊಡ್ಡಹೆಜ್ಜೂರು, ನೇರಳಕುಪ್ಪೆ ಆಸ್ಪತ್ರೆ ವೈದ್ಯರಾದ ಡಾ.ಸುಧಾಕರ್,ಡಾ.ಸುನಂದ, ಡಾ.ಹರ್ಷರವರು, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರು ಸೇರಿದಂತೆ ಆಶಾಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲವೆಂದು ಟಿಎಚ್‌ಒ ಡಾ.ಕೀರ್ತಿಕುಮಾರ್ ತಿಳಿಸಿದ್ದಾರೆ.

ಟ್ಯಾಂಕರ್ ಮೂಲಕ ನೀರು
ಪೈಪ್ ಒಡೆದಿರುವ ಸ್ಥಳವನ್ನು ಪತ್ತೆ ಹಚ್ಚಿ ಸರಿಪಡಿಸಲಾಗಿದ್ದು, ಟ್ಯಾಂಕನ್ನು ಸ್ವಚ್ಚಗೊಳಿಸಲಾಗಿದೆ. ಮೂರು ದಿನಗಳ ತನಕ ಉಪಯೋಗಿಸಲು ಸಾದ್ಯವಾಗದ ಕಾರಣ ಗ್ರಾಮಕ್ಕೆ ಟ್ಯಾಂಕರ್ ಮೂಲಕವೇ ನೀರು ಪೂರೈಸಲಾಗುತ್ತಿದೆ. ಅಲ್ಲದೆ ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಥಳದಲ್ಲೇ ಮೊಕ್ಕಾ ಹೂಡಿರುವ ತಾ.ಪಂ.ಇಒ ಶಿವಕುಮಾರ್ ತಿಳಿಸಿದರು. ಪಿಡಿಒ ಷಡಕ್ಷರಿ ಸ್ಥಳದಲ್ಲೇ ಇದ್ದಾರೆ.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.