LS Election 4ನೇ ಹಂತಕ್ಕೆ ಬಹಿರಂಗ ಪ್ರಚಾರ ಅಂತ್ಯ: 96 ಕ್ಷೇತ್ರಕ್ಕೆ ನಾಳೆ ಮತ

ಲೋಕಸಭೆ ಜತೆಗೆ ಒಡಿಶಾದ 28, ಆಂಧ್ರದ ಎಲ್ಲ 175 ವಿಧಾನಸಭೆ ಕ್ಷೇತ್ರಗಳಿಗೂ ಚುನಾವಣೆ

Team Udayavani, May 12, 2024, 6:20 AM IST

voter

ಹೊಸದಿಲ್ಲಿ: ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರವು ಶನಿವಾರ ಅಂತ್ಯವಾಗಿದ್ದು, ಸೋಮವಾರ ಮತದಾನ ನಡೆಯಲಿದೆ. 10 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 96 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಜೂನ್‌ 4ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ನಾಲ್ಕನೇ ಹಂತದಲ್ಲಿ ಆಂಧ್ರ ಪ್ರದೇಶದ ಎಲ್ಲ 25, ತೆಲಂಗಾಣದ ಎಲ್ಲ 17 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದರ ಜತೆಗೆ ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಿಗೂ ವೋಟಿಂಗ್‌ ನಡೆಯಲಿದೆ. ಆಡಳಿತಾರೂಢ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಎಲ್ಲ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ, ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಎನ್‌ಡಿಎ ಭಾಗವಾಗಿ ಸೀಟು ಹಂಚಿಕೆಯೊಂದಿಗೆ ಸ್ಪರ್ಧಿಸಿವೆ.

ಒಡಿಶಾ ವಿಧಾನಸಭೆ 1ನೇ ಹಂತದ ಚುನಾವಣೆ: ಒಡಿಶಾದ 147 ವಿಧಾನಸಭೆ ಕ್ಷೇತ್ರಗಳ ಪೈಕಿ ಮೇ 13ರಂದು 28 ವಿಧಾನಸಭೆ ಕ್ಷೇತ್ರ ಹಾಗೂ 4 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಡಿಶಾದಲ್ಲಿ ಬಿಜು ಜನತಾದಳ ಸದ್ಯ ಅಧಿಕಾರದಲ್ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಕೂಡ ಒಡಿಶಾವನ್ನು ತೆಕ್ಕೆಗೆ ಪಡೆಯಲು ಹವಣಿಸುತ್ತಿವೆ.

4ನೇ ಹಂತ ಪ್ರಮುಖ:  ಈಗಾಗಲೇ ಮೂರು(ಎ.19, ಎ.26 ಮತ್ತು ಮೇ 7) ಹಂತದಲ್ಲಿ 283 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಹಾಗಾಗಿ 4ನೇ ಹಂತದ 96 ಕ್ಷೇತ್ರಗಳ ಲೋಕಸಭೆ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ.  ಬಿಜೆಪಿ, ಕಾಂಗ್ರೆಸ್‌, ಟಿಡಿಪಿ, ವೈಎಸ್‌ಆರ್‌ ಕಾಂಗ್ರೆಸ್‌, ಬಿಜು ಜನತಾದಳ ಸೇರಿದಂತೆ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿವೆ. ಬಹಿರಂಗ ಪ್ರಚಾರ ಅಂತ್ಯವಾದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಇನ್ನು ಮನೆ ಮನೆಗೆ  ತೆರಳಿ ಪ್ರಚಾರ ನಡೆಸಲಿದ್ದಾರೆ.

ಎಲ್ಲೆಲ್ಲಿ ಚುನಾವಣೆ?: ಆಂಧ್ರ ಪ್ರದೇಶ(25), ತೆಲಂಗಾಣ(17), ಉತ್ತರ ಪ್ರದೇಶ(13), ಮಹಾರಾಷ್ಟ್ರ(11), ಮಧ್ಯ ಪ್ರದೇಶ(8), ಪಶ್ಚಿಮ ಬಂಗಾಲ(8),  ಬಿಹಾರ(5), ಝಾರ್ಖಂಡ್‌(5), ಒಡಿಶಾ(4), ಜಮ್ಮು ಮತ್ತು ಕಾಶ್ಮೀರ(1)ದಲ್ಲಿ ಚುನಾವಣೆ ನಡೆಯಲಿದೆ.

ಪ್ರಮುಖ ಅಭ್ಯರ್ಥಿಗಳು: ಅಖೀಲೇಶ್‌ ಯಾದವ್‌, ಮಹುವಾ ಮೊಯಿತ್ರಾ, ಅಮೃತಾ ರಾಯ್‌, ಯೂಸುಫ್ ಪಠಾಣ್‌, ಅಧೀರ್‌ ರಂಜನ್‌ ಚೌಧರಿ, ನಿರ್ಮಲ್‌ ಕುಮಾರ್‌, ಗಿರಿರಾಜ್‌ ಸಿಂಗ್‌, ವೈ.ಎಸ್‌.ಶರ್ಮಿಳಾ, ಅರ್ಜುನ್‌ ಮುಂಡಾ, ಶತ್ರುಘ್ನ ಸಿನ್ಹಾ, ಮಾಧವಿ ಲತಾ, ಅಸಾದುದ್ದೀನ್‌ ಓವೈಸಿ ಮತ್ತಿತರರು.

3ನೇ ಹಂತದಲ್ಲಿ ಶೇ.65.68 ಮತದಾನ: ಚುನಾವಣ ಆಯೋಗ

ಮೇ 7ರಂದು ಮುಕ್ತಾಯವಾದ 3ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು ಶೇ.65.58ರಷ್ಟು ಮತದಾನ ನಡೆದಿದೆ ಎಂದು ಶನಿವಾರ ಚುನಾವಣ ಆಯೋಗ ತಿಳಿಸಿದೆ. ಒಟ್ಟು ಮತದಾರರ ಪೈಕಿ ಶೇ.66.89 ಪುರುಷರು, ಶೇ.64.4 ಮಹಿಳೆಯರು ಮತ್ತು ಶೇ.25.2ರಷ್ಟು ತೃತೀಯ ಲಿಂಗಿಗಳು ಮತದಾನ ಮಾಡಿದ್ದಾರೆ. 3ನೇ ಹಂತಕ್ಕೆ ಮತದಾನ ಮಾಡಲು ಒಟ್ಟು 17.24 ಕೋಟಿ ಜನರು ಅರ್ಹರಾಗಿದ್ದರು. 2019ರ ಚುನಾವಣೆ ಮೂರನೇ ಹಂತದಲ್ಲಿ ಶೇ.68.4ರಷ್ಟು ಮತದಾನವಾಗಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.