Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ಸಮ್ಮತಿಸಿದ ಬಿಜೆಪಿ

Team Udayavani, May 13, 2024, 7:15 AM IST

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇ.ಸಿ. ನಿಂಗರಾಜು ಹೆಸರು ಪ್ರಕಟಿಸಿದ್ದ ಬಿಜೆಪಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮಿತ್ರಪಕ್ಷ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ- ಜೆಡಿಎಸ್‌ ನಡುವೆ ಏರ್ಪಟ್ಟಿದ್ದ ಮೈತ್ರಿ ಪ್ರಜ್ವಲ್‌ ಪ್ರಕರಣದ ಹಿನ್ನೆಲೆಯಲ್ಲಿ ಮುರಿದು ಬೀಳಬಹುದೆಂಬ ವದಂತಿಗಳು ಹರಡಿದ್ದವು. ಇದಕ್ಕೆಲ್ಲ ತೆರೆ ಎಳೆದಂತೆ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಜೂ. 3ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲೂ ಮೈತ್ರಿ ಮುಂದುವರಿದಿದೆ.

ಆರಂಭದಲ್ಲಿ 4:2 ಅನುಪಾತದಲ್ಲಿ ಕ್ಷೇತ್ರ ಹಂಚಿ ಕೊಳ್ಳಲು ಜೆಡಿಎಸ್‌ ಸೂತ್ರ ಹೆಣೆದಿತ್ತು. ನೈಋತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳನ್ನು ಬಿಜೆಪಿ ತನಗೇ ಬಿಟ್ಟುಕೊಡುವ ಮೂಲಕ ಮೈತ್ರಿಯ ಪಾಲು ಕೊಡಲಿದೆ ಎಂಬ ಲೆಕ್ಕಾಚಾರದಲ್ಲಿತ್ತು.

ಆದರೆ ಶನಿವಾರ ಏಕಾಏಕಿ ಐದು ಕ್ಷೇತ್ರಗಳ ಅಭ್ಯರ್ಥಿ ಹೆಸರು ಪ್ರಕಟಿಸಿದ್ದ ಬಿಜೆಪಿಯು 5:1 ಅನುಪಾತವನ್ನು ಜೆಡಿಎಸ್‌ ಮುಂದಿಟ್ಟಿತ್ತು.

ಬಿಜೆಪಿ ಮನವೊಲಿಸಿದ ಜೆಡಿಎಸ್‌
ಇದರಿಂದ ವಿಚಲಿತರಾದ ಜೆಡಿಎಸ್‌ ನಾಯಕರು ರವಿವಾರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಶ್ರೀಕಂಠೇಗೌಡ ಉಪಸ್ಥಿತರಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೂಲಕ ಬಿಜೆಪಿ ವರಿಷ್ಠರ ಸಂಪರ್ಕ ಸಾಧಿಸಿದ ಜೆಡಿಎಸ್‌ ನಾಯಕ ಟಿಕೆಟ್‌ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳು ಇದ್ದು, ಇದು ಜೆಡಿಎಸ್‌ನ ಪ್ರಬಲ ನೆಲೆಯಾಗಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ ಇದೇ ಕ್ಷೇತ್ರದಿಂದ ಗೆದ್ದಿತ್ತು. ಆದರೆ ಜೆಡಿಎಸ್‌ನಿಂದ ಗೆದ್ದಿದ್ದ ಮರಿತಿಬ್ಬೇಗೌಡ ಕಾಂಗ್ರೆಸ್‌ ಸೇರಿ ಟಿಕೆಟ್‌ ಗಿಟ್ಟಿಸಿಕೊಂಡಿದ್ದು, ಅವರಿಗೆ ಪ್ರಬಲ ಪೈಪೋಟಿ ಕೊಡುವುದಾದರೆ ಜೆಡಿಎಸ್‌ ಮಾತ್ರ. ಮೈತ್ರಿಧರ್ಮ ಪಾಲನೆ ಆಗುವ ಭರವಸೆಯಲ್ಲಿ ಜೆಡಿಎಸ್‌ನ ಶ್ರೀಕಂಠೇಗೌಡರು ಕ್ಷೇತ್ರಕಾರ್ಯ ಆರಂಭಿಸಿದ್ದು, ಗೆದ್ದ ಕ್ಷೇತ್ರದ ಟಿಕೆಟ್‌ ತಪ್ಪಿಸುವುದು ಬೇಡ ಎಂಬ ಬೇಡಿಕೆಯನ್ನು ಬಿಜೆಪಿ ವರಿಷ್ಠರ ಮುಂದಿಡಲಾಗಿತ್ತು.

ಅಳೆದು-ತೂಗಿ ಕ್ಷೇತ್ರ ಬಿಟ್ಟುಕೊಡಲು ಒಪ್ಪಿರುವ ಬಿಜೆಪಿಯು ಇ.ಸಿ. ನಿಂಗರಾಜು ಅವರ ಹೆಸರನ್ನು ತಡೆಹಿಡಿದಿದೆ. ಇತ್ತ ಜೆಡಿಎಸ್‌ ತನ್ನ ಅಭ್ಯರ್ಥಿ ಯಾರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಶ್ರೀಕಂಠೇಗೌಡ ಮಾತ್ರವಲ್ಲದೆ, ವಿವೇಕಾನಂದ ಕೂಡ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಈ ಹಿಂದೆ ಶ್ರೀಕಂಠೇಗೌಡರು ಒಮ್ಮೆ ಗೆದ್ದು ಆಧಿಪತ್ಯ ಸ್ಥಾಪಿಸಿದ್ದರಿಂದ ಬಹುತೇಕ ಅವರಿಗೇ ಟಿಕೆಟ್‌ ಸಿಗುವ ಸಾಧ್ಯತೆಗಳಿವೆ.

ಕೇಂದ್ರದ ನಾಯಕರು ಮೇಲ್ಮನೆ
ಚುನಾವಣೆ ಬಗ್ಗೆ ಒಂದು ತಿಂಗಳಿನಿಂದಲೇ ವರದಿ ಪಡೆದಿದ್ದಾರೆ. ಚರ್ಚೆ ಮಾಡಿ, ಜೆಡಿಎಸ್‌ ಜತೆ ಹೊಂದಾಣಿಕ ಆಗಿರುವುದರಿಂದ ನಮಗೆ ಸೀಟು ಕಡಿಮೆ ಆಗಿದೆ. ಹೊಂದಾಣಿಕೆ ದೃಷ್ಟಿಯಿಂದ ಕೇಂದ್ರದ ನಾಯಕರು ಘೋಷಿಸಿರುವುದು ಪಕ್ಷದ ತೀರ್ಮಾನ. ಒಟ್ಟಿಗೆ ಕೆಲಸ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ನಮಗೆ ಮೂವರ ಪಟ್ಟಿ ಕಳುಹಿಸಲು ಹೇಳಿದ್ದರು. ಅದರಂತೆ ಕಳುಹಿಸಿದ್ದೆವು. ಅವರು ಘೋಷಿಸಿದ್ದಾರೆ.
-ಆರ್‌. ಅಶೋಕ್‌, ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.