Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ
Team Udayavani, May 13, 2024, 12:36 PM IST
ಶಿವಮೊಗ್ಗ: ಜಮೀನು ವಿವಾದದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾಲೂಕಿನ ದುಮ್ಮಳ್ಳಿಯಲ್ಲಿ ಸೋಮವಾರ ಹಾಡಹಗಲೇ ರಕ್ತ ಹರಿದಿದೆ.
ಸತೀಶ್ ನಾಯ್ಕ (28 ವ) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.
ಕೊಲೆ ನಡೆದ ಜಮೀನು ಕಳೆದ ಹಲವಾರು ವರ್ಷಗಳಿಂದ ವಿವಾದದಲ್ಲಿತ್ತು. ನ್ಯಾಯಾಲಯವು ಈ ಜಮೀನಿನೊಳಗೆ ಯಾರೂ ಕೂಡ ತೆರಳದಂತೆ ಇಂಜಕ್ಷನ್ ಆದೇಶ ನೀಡಿತ್ತು.
ಇಂದು (ಮೇ 13) ಬೆಳಿಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್ ಗುಂಪಿನೊಂದಿಗೆ ಮಾತಿಗೆ ಮಾತು ಬೆಳೆದಿದೆ. ಸ್ಥಳದಲ್ಲಿದ್ದ ಕುಡುಗೋಲಿನಿಂದ ಮತ್ತು ಕೈಗಳಿಂದ ಗುಂಪು ಹಲ್ಲೆ ಮಾಡಿದೆ. ಪರಿಣಾಮ ಸತೀಶ್ ನಾಯ್ಕ ಕೊಲೆಯಾಗಿದೆ.
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಅಯೋಧ್ಯೆ ರೀತಿ ವಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.