Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ


Team Udayavani, May 13, 2024, 2:29 PM IST

BJP will get a big win in South India: Amit Shah

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಗೆಲುವು ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. “ನಾವು ದಕ್ಷಿಣದ ನಾಲ್ಕು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ದೊಡ್ಡ ಗೆಲುವಿನತ್ತ ಸಾಗುತ್ತಿದ್ದೇವೆ” ಎಂದು ಶಾ ಎನ್ ಡಿಟಿವಿ ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಕರ್ನಾಟಕ ಹೊರತು ಪಡಿಸಿ ದಕ್ಷಿಣದ ಉಳಿದ ರಾಜ್ಯಗಳಲ್ಲಿ ಬಿಜೆಪಿ ಹೆಚ್ಚಿನ ಬಲ ಹೊಂದಿಲ್ಲ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಖಾತೆಗಳು 109 ಸ್ಥಾನಗಳನ್ನು ಹೊಂದಿದ್ದು, ಕಳೆದ ಬಾರಿ ಬಿಜೆಪಿ 29 ಸ್ಥಾನಗಳನ್ನು ಗೆದ್ದಿದೆ. ಅದರಲ್ಲಿ ಕರ್ನಾಟಕದಲ್ಲಿಯೇ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ವರು ಗೆದ್ದಿದ್ದರು. ಆಂಧ್ರಪ್ರದೇಶ ಮತ್ತು ತಮಿಳುನಾಡು ಎರಡರಲ್ಲೂ ಬಿಜೆಪಿ ಯಾವುದೇ ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. 20 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿಯೂ ಪಕ್ಷ ಯಾವುದೇ ಸ್ಥಾನ ಗೆದ್ದಿಲ್ಲ.

ಅಮಿತ್ ಶಾ ಮತ್ತು ಪ್ರಧಾನಿ ಮೋದಿ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿಯ ರ್ಯಾಲಿಗಳಲ್ಲಿ ಭಾಗವಹಿಸಿದ್ದಾರೆ. ಮೋದಿ ಅವರು ಈ ವರ್ಷ ಕೇರಳ ಮತ್ತು ತಮಿಳುನಾಡಿಗೆ ಹನ್ನೆರಡು ಬಾರಿ ಭೇಟಿ ನೀಡಿದ್ದಾರೆ. ಹಿರಿಯ ನಾಯಕರುಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಿಯೋಜಿಸಿದ್ದಾರೆ. ತಿಂಗಳ ಆರಂಭದಲ್ಲಿ ಕರ್ನಾಟಕದ ಹಾವೇರಿಯಲ್ಲಿ ಮಾತನಾಡಿದ್ದ ಶಾ, “ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ನಾವು ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ” ಎಂದಿದ್ದರು.

“ದಕ್ಷಿಣದಲ್ಲಿ ಈ ಬಾರಿ ನಮ್ಮ ಅತ್ಯುತ್ತಮ ಪ್ರದರ್ಶನವಾಗಿದೆ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ನಾವು ಉತ್ತಮ ಫಲಿತಾಂಶವನ್ನು ಪಡೆಯುತ್ತೇವೆ. ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ, ಪ್ರಧಾನಿ ಮೋದಿ ಅವರ ಜನಪ್ರಿಯತೆ ಬೆಳೆದಿದೆ ಇದರಿಂದ ನಾವು ಮತ ಮತ್ತು ಸ್ಥಾನಗಳನ್ನು ಪಡೆಯಬಹುದು” ಎಂದಿದ್ದರು.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.