![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 13, 2024, 2:20 PM IST
ಬೆಂಗಳೂರು: ದೆಹಲಿಯ ಕೆಲ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.
ನಗರ ಪೊಲೀಸ್ ಇಲಾಖೆಯ ವಿಶೇಷ ಘಟಕ (ಸ್ಪೆಷಲ್ ಬ್ರ್ಯಾಚ್)ದ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಎಚ್ಚೆತ್ತ ಪೊಲೀಸರು ಕೂಡಲೇ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ, ಯಾವುದೇ ರೀತಿಯ ಸ್ಫೋಟಕ ವಸ್ತುಗಳಾಗಲಿ, ಬಾಂಬ್ ಆಗಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ವಿಶೇಷ ಘಟಕದ ಇ-ಮೇಲ್ ಪರಿಶೀಲನೆ ವೇಳೆ ನಗರದ ಸೇಂಟ್ ಫಿಲೋಮಿನಾ, ಸೆಂಟ್ ಮಾರ್ಥಸ್, ಜೆಎಂಜೆ, ಆಸ್ಪತ್ರೆ ಸೇರಿ ನಗರದ ಆರೇಳು ಆಸ್ಪತ್ರೆಗಳ ಹೆಸರುಗಳ ಉಲ್ಲೇಖೀಸಿರುವ ಕಿಡಿಗೇಡಿಗಳು, ಕೆಲವೇ ಕ್ಷಣಗಳಲ್ಲಿ ಈ ಆಸ್ಪತ್ರೆಗಳಲ್ಲಿ ಇಡಲಾಗಿರುವ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಬಂದಿದೆ.
ಅದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಜತೆ ಸ್ಥಳಕ್ಕೆ ಕರೆದೊಯ್ದು ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಕುರಿತು ಮಾಹಿತಿ ನೀಡಿದ ನಗರಪೊಲೀಸ್ ಆಯುಕ್ತ ಬಿ.ದಯಾನಂದ, ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ಪತ್ತೆಯಾಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.