Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು
Team Udayavani, May 13, 2024, 3:22 PM IST
ಉತ್ತರಪ್ರದೇಶ(ಮೊರದಾಬಾದ್): ದಿಢೀರ್ ಎಂದು ಕೋತಿಗಳು ರಸ್ತೆಗೆ ಲಗ್ಗೆ ಇಟ್ಟ ಪರಿಣಾಮ ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಬ್ಯಾಂಕ್ ಉದ್ಯೋಗಿಗಳು ಕೊನೆಯುಸಿರೆಳೆದಿರುವ ಘಟನೆ ಮೊರದಾಬಾದ್-ಅಲಿಗಢ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ(ಮೇ 13) ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ
ಮೊರದಾಬಾದ್ ನ ಡೋಮ್ ಗಢ್ ಪ್ರದೇಶದಲ್ಲಿ ಈ ಅಪಘಾತ ಘಟನೆ ನಡೆದಿತ್ತು. ಮೃತರನ್ನು ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಸೌರಭ್ ಶ್ರೀವಾತ್ಸವ್, ಕ್ಯಾಶಿಯರ್ ದಿವ್ಯಾಂಶು ಮತು ಹಾಗೂ ಅಮಿತ್ ಎಂದು ಗುರುತಿಸಲಾಗಿದೆ.
ಆಕ್ಸಿಸ್ ಬ್ಯಾಂಕ್ ನ ಮೂವರು ಉದ್ಯೋಗಿಗಳು ತೆರಳುತ್ತಿದ್ದಾಗ ಕಾರು ಟ್ಯಾಂಕರ್ ಗೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಮಿತ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಮಂಗಗಳ ಗುಂಪು ದಿಢೀರನೆ ರಸ್ತೆಗೆ ಆಗಮಿಸಿದ್ದ ಪರಿಣಾಮ ಈ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.