Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ
ಆಸ್ಪತ್ರೆಗೆ ಕರೆದೊಯ್ದಾಗ ಬ್ರೈನ್ ಡೆಡ್ ಎಂದ ವೈದ್ಯರು
Team Udayavani, May 14, 2024, 12:15 AM IST
ಮಂಡ್ಯ: ತೆಲಂಗಾಣದ ಮೆಹಬೂಬ್ ನಗರದ ಸಮೀಪ ಸಂಭವಿಸಿದ ಅಪಘಾತದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಂದಿದ್ದರೆ ಕಿರುತೆರೆ ನಟಿ ಪವಿತ್ರಾ ಜಯರಾಂ ಸಾಯುತ್ತಿರಲಿಲ್ಲ ಎಂದು ಕಾರಿನಲ್ಲಿದ್ದ ಸ್ನೇಹಿತ ಹಾಗೂ ತೆಲುಗು ನಟ ಚಂದ್ರಕಾಂತ್ ಹೇಳಿದರು.
ಕಿರುತೆರೆ ನಟಿ ಪವಿತ್ರಾ ಜಯರಾಂ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆ್ಯಂಬುಲೆಲೆನ್ಸ್ ಸುಮಾರು 20 ನಿಮಿಷ ತಡವಾಗಿ ಬಂದಿದ್ದರಿಂದಲೇ ಪವಿತ್ರಾ ಸಾಯುವಂತಾಯಿತು ಎಂದರು.
ಕಾರಿನಲ್ಲಿ ನಾನು, ಪವಿತ್ರಾ, ಅವರ ಅಕ್ಕನ ಮಗಳು ಹಾಗೂ ಚಾಲಕ ಇದ್ದೆವು. 20 ನಿಮಿಷ ತಡವಾಗಿ ಬಂದ ಆ್ಯಂಬುಲೆನ್ಸ್‌ನಲ್ಲಿಯೇ ಪವಿತ್ರಾರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಬ್ರೈನ್ ಡೆಡ್ ಆಗಿದೆ ಎಂದು ಹೇಳಿದರು ಎಂದರು.
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
ಪವಿತ್ರಾ ಜಯರಾಂ ಅವರ ಅಂತ್ಯಸಂಸ್ಕಾರವು ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಮದ ಜಮೀನಿನಲ್ಲಿ ಸೋಮವಾರ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು. ಮೃತದೇಹ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಟಿಯ ಮನೆಯ ಮುಂದೆಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ತ್ರಿನಯಿನಿ ಧಾರಾವಾಹಿಯ ನಟ ಚಂದುಗೌಡ ಸಹಿತ ಹಲವಾರು ಕಿರುತೆರೆ ಕಲಾವಿದರು ಆಗಮಿಸಿ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.