Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ
Team Udayavani, May 14, 2024, 1:32 AM IST
ಸುಳ್ಯ: ಎರಡು ದಿನಗಳಿಂದ ಕೊಡಗು ಹಾಗೂ ಸುಳ್ಯ ಭಾಗದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಸುಳ್ಯದ ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಅಲ್ಪ ಪ್ರಮಾಣದಲ್ಲಿ ಹೆಚ್ಚಳಗೊಂಡಿದೆ.ಈ ಬಾರಿ ಬೇಸಗೆಯ ಅತಿಯಾದ ಬಿಸಿಲು ಮತ್ತು ಪೂರ್ವ ಮುಂಗಾರು ಮಳೆ ಬಾರದ್ದರಿಂದ ಪಯಸ್ವಿನಿಯಲ್ಲಿ ನೀರಿನ ಹರಿವು ಇಳಿಮುಖಗೊಂಡಿತ್ತು. ಸುಳ್ಯದ ಅಣೆಕಟ್ಟಿನಿಂದಲೂ ಸ್ವಲ್ಪವೇ ನೀರು ಹೊರ ಹೋಗುತ್ತಿತ್ತು. ಕೆಳ ಭಾಗದ ಗುಂಡಿಗಳಲ್ಲಿ ಮಾತ್ರ ನೀರಿನ ಸಂಗ್ರಹವಿತ್ತು.
ಕೊಡಗು ಭಾಗದಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸುಳ್ಯದಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಸಹಜವಾಗಿ ಕೊಡಗು ಭಾಗದಿಂದ ಹರಿದು ಬರುವ ಪಯಸ್ವಿನಿಯಲ್ಲಿ ಹರಿವು ಹೆಚ್ಚಿದೆ. ಅಣೆಕಟ್ಟಿನಲ್ಲೂ ನೀರು ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಹರಿಯುತ್ತಿದೆ. ಸುಳ್ಯ ಪರಿಸರದಲ್ಲಿ ಶನಿವಾರ ಸಂಜೆ ಹಾಗೂ ರವಿವಾರ ರಾತ್ರಿ ಉತ್ತಮ ಮಳೆಯಾಗಿದೆ. ಅಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹ ಇದ್ದುದರಿಂದ ನಗರದಲ್ಲಿ ನೀರಿನ ಸಮಸ್ಯೆ ಕಂಡುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.