ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ
Team Udayavani, May 14, 2024, 7:30 AM IST
ಮಂಗಳೂರು: ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಾರ್ವಜನಿಕರು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ.
ಪ್ರತಿಕೂಲ ಹವಾಮಾನದ ಸಮಯದಲ್ಲಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು. ಗುಡುಗು- ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯಬೇಕು ಎಂದು ತಿಳಿಸಲಾಗಿದೆ.
ಕೆರೆ ಮತ್ತು ನದಿಗಳು ಹಾಗೂ ಇನ್ನಿತರ ನೀರಿನ ಮೂಲಗಳಿಂದ ತತ್‌ಕ್ಷಣವೇ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್, ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು ಹಾಗೂ ಮನೆಗಳಲ್ಲೆ ಇರುವುದು ವಾಹನ ಚಾಲನೆಯಲ್ಲಿದ್ದರ ತತ್‌ಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು ಹಾಗೂ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು ಹಾಗೂ ಮರಗಳು ಮತ್ತು ವಿದ್ಯುತ್ ಲೈನ್‌ಗಳಿಂದ ದೂರ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎನ್ನಲಾಗಿದೆ.
ಪ್ರಥಮ ಚಿಕಿತ್ಸೆ ಅಗತ್ಯ
ಸಿಡಿಲು/ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112/108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬಂದಿ ಆಗಮಿಸುವ ಮುನ್ನವೇ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು/ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತತ್‌ಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರಿಯುವುದರ ಬಗ್ಗೆ, ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತತ್‌ಕ್ಷಣವೇ ಅವನನ್ನು/ಅವಳನ್ನು ಸೂಕ್ತ ರಕ್ಷಣ ಸ್ಥಳಕ್ಕೆ ಸ್ಥಳಾಂತರಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು/ಆಘಾತಕ್ಕೆ ಒಳಗಾಗಿರಬಹುದು ಆದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ ಸೂಕ್ತ ಚಿಕಿತ್ಸೆಗಾಗಿ ತತ್‌ಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯ ಸ್ಥಿತಿಯ ಬಗ್ಗೆ, ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತತ್‌ಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಪ್ರಕಟನೆ ತಿಳಿಸಿದೆ.
ಮರಗಳ ಕೆಳಗೆ ಆಶ್ರಯ ಪಡೆಯದಿರಿ
ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೂನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು.
-ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು
-ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕ್‌ಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು
-ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
-ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು
-ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು
-ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
-ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರ ಯಾವುದೇ
-ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು
-ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು -ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು.
-ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು. ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್/ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‌ಟಾಪ್, ವೀಡಿಯೋ ಗೇಮ್ ಸಾಧನಗಳು, ಮೊಬೈಲ್ ಫೋನ್, ವಾಷಿಂಗ್ ಮೆಷಿನ್, ಸ್ಟವ್ ಹಾಗೂ ಇತರ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.