Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ
Team Udayavani, May 14, 2024, 10:14 AM IST
ಉತ್ತರ ಪ್ರದೇಶ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಪೋಲೀಸರ ಮಾಹಿತಿಯ ಪ್ರಕಾರ, ದೆಹಲಿ-ಲಕ್ನೋ ಹೆದ್ದಾರಿ NH-9 ರ ಗಢ್ ಕೊಟ್ವಾಲಿ ಪ್ರದೇಶದ ಅಲ್ಲಾಬಕ್ಷಪುರ ಕಟ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಕುಟುಂಬವು ಗಾಜಿಯಾಬಾದ್‌ನಿಂದ ಗಜ್ರೌಲಾಗೆ ಹೋಗುತ್ತಿದ್ದಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಾಜಿಯಾಬಾದ್ ನಿವಾಸಿಗಳು ಎಂದು ಹೇಳಲಾಗಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯ ನಂತರ, ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು.
ಪೊಲೀಸರ ಮಾಹಿತಿ ಪ್ರಕಾರ ಕಾರು ಚಾಲಕನ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯಲ್ಲಿನ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ಯಾಂಕರ್ ಗೆ ನೇರವಾಗಿ ಡಿಕ್ಕಿ ಹೊಡೆದಿದೆ, ಅಪಘಾತದ ತೀವ್ರತೆ ಎಷ್ಟಿತೆಂದರೆ ಕಾರು ನುಜ್ಜುಗುಜ್ಜಾಗಿದ್ದು ಪ್ರಯಾಣಿಕರು ಕಾರಿನೊಳಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು ಕೆಲ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಯಿತು. ಅಲ್ಲದೆ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Mumbai: ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ
#WATCH | Uttar Pradesh: Six died in collision between two vehicles on the Delhi-Lucknow Highway in Garh Kotwali area of Hapur: Hapur ASP, Rajkumar Aggarwal pic.twitter.com/caN4rxImH7
— ANI (@ANI) May 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.