State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, May 14, 2024, 2:25 PM IST
ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಉತ್ತಮ ವಾತಾವರಣ
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.
ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.
ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.
ಹಿಟ್ ಅಂಡ್ ರನ್ ಕೇಸ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಹೇಳಿದರು.
ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ
ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.