Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್
Team Udayavani, May 14, 2024, 6:36 PM IST
ಹೊಸದಿಲ್ಲಿ: ಚುನಾವಣಾ ಪ್ರಚಾರದ ವೇಳೆ ದ್ವೇಷ ಭಾಷಣ ಮಾಡಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್ಸಿ ಶರ್ಮಾ ಅವರ ಪೀಠವು ಅರ್ಜಿದಾರರಿಗೆ ದೂರು ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಲು ಕೇಳಿದೆ.
“ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ. ರಿಟ್ ಆಫ್ ಮ್ಯಾಂಡಮಸ್ ಗಾಗಿ ನೀವು ಮೊದಲು ಅಧಿಕಾರಿಗಳನ್ನು ಸಂಪರ್ಕಿಸಬೇಕು” ಎಂದು ಪೀಠ ಹೇಳಿದೆ. ಬಳಿಕ ಅರ್ಜಿದಾರರು ಮನವಿಯನ್ನು ಹಿಂತೆಗೆದುಕೊಂಡರು.
ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಧಾನಿ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಆನಂದ್ ಎಸ್ ಜೊಂಧಲೆ ಮೂಲಕ ಫಾತಿಮಾ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.