D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

ಪ್ರಜ್ವಲ್‌ ಕೇಸ್‌ನಲ್ಲಿ ಸಣ್ಣ ಹಸ್ತಕ್ಷೇಪವಿದ್ದರೂ ಬೆಲೆ ತೆರಲು ಸಿದ್ಧ

Team Udayavani, May 14, 2024, 8:50 PM IST

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

ಬೆಂಗಳೂರು: ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ. ಆದರೆ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನನ್ನ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಸೂಚ್ಯವಾಗಿ ಹೇಳಿದರು.

ಪೆನ್‌ಡ್ರೈವ್‌ ವಿಚಾರದಲ್ಲಿ ಈ ಹಿಂದೆ ಮಹಾನಾಯಕ ಅಂತ ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಅಂತ ಜರಿದಿದ್ದಾರೆ ಎಂದಾಗ, ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ, ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಪ್ರದರ್ಶಕ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ರೇವಣ್ಣ ಸ್ಥಿತಿ ನೋಡಿದ್ರೆ ಬೇಸರ ಆಗುತ್ತೆ:
ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ರೇವಣ್ಣ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ನಾನೂ ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ ಆಗಿದ್ದೇನೆ. ಆದರೆ ನನ್ನ ಬ್ರದರ್‌ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.