London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ
Team Udayavani, May 15, 2024, 8:41 AM IST
ಲಂಡನ್ : ನಗರದ ವಾಯುವ್ಯ ಭಾಗದ ಬಸ್ ನಿಲ್ದಾಣದಲ್ಲಿ 66 ವರ್ಷದ ಭಾರತೀಯ ಮೂಲದ ಮಹಿಳೆಯೊಬ್ಬರನ್ನು ಇರಿದು ಹತ್ಯೆ ಮಾಡಲಾಗಿದೆ. ಘಟನೆಯು ಮೇ 9 ರಂದು ಲಂಡನ್ ಸ್ಥಳೀಯ ಕಾಲಮಾನ ಸುಮಾರು 11.50 ಕ್ಕೆ ಸಂಭವಿಸಿದೆ. ಆರೋಪಿ 22 ವರ್ಷದ ಯುವಕನ ಮೇಲೆ ಕೊಲೆ ಆರೋಪ ಹೊರಿಸಲಾಗಿದ್ದು, ಮಂಗಳವಾರ ನಡೆದ ವಿಚಾರಣೆಯಲ್ಲಿ ಕಸ್ಟಡಿಗೆ ಪಡೆಯಲಾಗಿದೆ.
ವೈದ್ಯಕೀಯ ಕಾರ್ಯದರ್ಶಿಯಾಗಿ ರಾಷ್ಟ್ರೀಯ ಆರೋಗ್ಯ ಸೇವೆ (NHS) ಗಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಅನಿತಾ ಮುಖಿ ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಕಳೆದ ವಾರ ಲಂಡನ್ನ ಎಡ್ಗ್ವೇರ್ ಪ್ರದೇಶದ ಬರ್ಂಟ್ ಓಕ್ ಬ್ರಾಡ್ವೇ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಜಲಾಲ್ ಡೆಬೆಲ್ಲಾ ಎಂಬಾತ ಎದೆ ಮತ್ತು ಕುತ್ತಿಗೆ ಭಾಗಕ್ಕೆ ಮಾರಣಾಂತಿಕವಾಗಿ ಇರಿದಿದ್ದಾನೆ.
ಪೊಲೀಸರು ಹತ್ಯೆ ನಡೆದ ದಿನ ಉತ್ತರ ಲಂಡನ್ನ ಕೊಲಿಂಡೇಲ್ ಪ್ರದೇಶದಲ್ಲಿ ಡೆಬೆಲ್ಲಾನನ್ನು ಬಂಧಿಸಿದ್ದಾರೆ. ಆಕ್ರಮಣಕಾರಿ ಆಯುಧವನ್ನು ಹೊಂದಿದ್ದಕ್ಕಾಗಿ ಆತನ ಮೇಲೆ ಆರೋಪ ಹೊರಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಮೆಟ್ರೋಪಾಲಿಟನ್ ಪೊಲೀಸರು, ಆರೋಪಿಯನ್ನು ಲಂಡನ್ನ ಓಲ್ಡ್ ಬೈಲಿ ಕೋರ್ಟ್ಗೆ ಹಾಜರುಪಡಿಸಲಾಗಿದೆ ಎಂದು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.