Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ


Team Udayavani, May 15, 2024, 11:32 AM IST

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

ಬೆಂಗಳೂರು: ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬೆಂಗಳೂರು ವಿವಿಯ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯು ಬೆಂಗಳೂರು ವಿವಿಯ ಕುಲಸಚಿವರಿಗೆ ನಿರ್ದೇಶನ ನೀಡಿದೆ.

ಹೈದರಬಾದ್‌ನ ಜ್ಯುಬಿಲಿ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ಕೆ. ಶಶಿಧರ್‌ ರೆಡ್ಡಿ ಎಂಬುವರು 2023ರ ಫೆ. 15ರಂದು ನೀಡಿದ್ದ ದೂರಿನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು 2024ರ ಮಾ.22ರಂದು ಮೈಲಾರಪ್ಪ ಸೇರಿದಂತೆ ಪ್ರಕರಣದಲ್ಲಿನ ಇತರ ಆರೋಪಿಗಳಾದ ಕೊರಟಗೆರೆ ಕೃಷ್ಣಪ್ರಸಾದ್‌, ಆರ್‌. ಜಗನ್ನಾಥ್‌, ಸುರೇಂದರ್‌ ರೆಡ್ಡಿ ಅವರನ್ನು ಬಂಧಿಸಿದ್ದರು. ಮೈಲಾರಪ್ಪ ಅವರ ಬಂಧನದ ಬಗ್ಗೆ ತೆಲಂಗಾಣ ಪೊಲೀಸರು ವಿವಿಗೆ ಮಾಹಿತಿ ನೀಡಿದ್ದರೂ, ಉನ್ನತ ಶಿಕ್ಷಣ ಇಲಾಖೆ ಮಾಹಿತಿ ಕೇಳಿದ್ದರೂ ಸಹ ವಿವಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಮೇ 5 ರಂದು ಉದಯವಾಣಿ ವರದಿ ಪ್ರಕಟಿಸಿತ್ತು.

ಆ ಬಳಿಕ ವಿವಿಯ ಕುಲಪತಿ ಅವರು ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಿವಿಯ ಸಿಂಡಿಕೇಟ್‌ನ ಸಭೆ ಕರೆದು ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಅಭಿಪ್ರಾಯ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯನ್ನು ಕೋರಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಮೈಲಾರಪ್ಪ ಅವರು 48 ಗಂಟೆಗೂ ಅಧಿಕ ಕಾಲ ಕಾರಾಗೃಹ ವಾಸದಲ್ಲಿದ್ದುದ್ದರಿಂದ ಬಂಧಿಸಲಾದ ದಿನಾಂಕದಿಂದ (ಮಾ.22) ಪೂರ್ವಾನ್ವಯ ಆಗುವಂತೆ ಅಮಾನತಿನಲ್ಲಿಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?: ಶಶಿಧರ್‌ ರೆಡ್ಡಿಗೆ ಯಲಹಂಕದ ಹೊಸಹಳ್ಳಿಯಲ್ಲಿ ಕೃಷ್ಣಪ್ರಸಾದ್‌ ಎಂಬವರಿಗೆ ಸೇರಿದ ಜಮೀನು ಕೊಡಿಸುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 5 ಕೋಟಿ ರೂ ಮುಂಗಡವನ್ನು ಆರೋಪಿಗಳು ಪಡೆದಿದ್ದರು. ಆ ಜಮೀನು ಕೃಷ್ಣಪ್ರಸಾದ್‌ ಅವರಿಗೆ ಸೇರಿಲ್ಲ ಎಂದು ತಿಳಿಯುತ್ತಲೇ ತಾನು ನೀಡಿದ್ದ ಮುಂಗಡವನ್ನು ವಾಪಾಸ್‌ ನೀಡುವಂತೆ ಶಶಿಧರ್‌ ರೆಡ್ಡಿ ಕೇಳಿದ್ದರು. ಆಗ ಪ್ರೊ. ಮೈಲಾರಪ್ಪ ಕರೆ ಮಾಡಿ ತನಗೆ ಸರ್ಕಾರದ ಮಟ್ಟದಲ್ಲಿ ಉತ್ತಮ ಸಂಕರ್ಪವಿದೆ, ಹಣಕ್ಕಾಗಿ ಆರೋಪಿಗಳ ಮೇಲೆ ಒತ್ತಡ ಹೇರಬೇಡಿ ಎಂದು ಬೆದರಿಕೆ ಹಾಕಿದ್ದರು. ಆ ಬಳಿಕ ಈ ಜಮೀನನ್ನು ಸರ್ಕಾರವು ವೈಎಎಸ್‌ ಚಾರಿಟಬಲ್‌ ಟ್ರಸ್ಟ್‌ ಮತ್ತು ಕೊಡವ ಸಮಾಜಕ್ಕೆ ಹಂಚಿಕೆ ಮಾಡಿರುವುದು ಶಶಿಧರ್‌ ರೆಡ್ಡಿ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಣವನ್ನು ವಾಪಸ್‌ ನೀಡುವಂತೆ ಕೇಳಿದಾಗ ಬೆದರಿಕೆ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ಶಶಿಧರ್‌ ರೆಡ್ಡಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.