Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು... 50 ಮಂದಿಯ ಮೇಲೆ ದೂರು
Team Udayavani, May 15, 2024, 4:02 PM IST
ಚಿಕ್ಕಮಗಳೂರು: ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ ಮೇಲೆ ದೂರು ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಾಗದ ವಿಚಾರಕ್ಕೆ ಇಡೀ ಗ್ರಾಮವೇ ರಣರಂಗವಾದಂತಾಗಿದೆ.
ಸರ್ಕಾರಿ ಜಾಗದಲ್ಲಿ ದೇವಾಲಯ ಕಟ್ಟಲು ಲಂಬಾಣಿ ಜನಾಂಗದವರು ಜಾಗಕ್ಕೆ ತಂತಿ ಬೇಲಿ ಹಾಕಿದ್ದರು. ಇದನ್ನು ವಿರೋಧಿಸಿ ಸಮುದಾಯ ಭವನ ಕಟ್ಟಲು ಇನ್ನೊಂದು ಸಮುದಾಯ ಪಟ್ಟು ಹಿಡಿದಿತ್ತು. ಈ ಗಲಾಟೆ ನಡುವೆಯೇ ಗ್ರಾಮದ ಕೆಲವರು ತಂತಿ ಬೇಲಿ ಕಿತ್ತು ಬಿಸಾಕಿದ್ದರು. ಹೀಗೆ ಎರಡೂ ಸಮುದಾಯದವರ ನಡುವೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಜಾಗ ವಿವಾದ ರಾತ್ರಿಯಿಡೀ ವಿಕೋಪಕ್ಕೆ ತಿರುಗಿತ್ತು. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ರು. ಘಟನೆ ಸಂಬಂಧ 50 ಮಂದಿಯ ಮೇಲೆ ದೂರು ದಾಖಲಾಗಿದೆ. ಬೂದಿ ಮುಚ್ಚಿದ ಕೆಂಡದಂತಾದ ನಾಗೇನಹಳ್ಳಿ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.