Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ
Team Udayavani, May 15, 2024, 6:02 PM IST
ಶಿರಸಿ: ಪ್ರತಿಷ್ಟಿತ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ, ಶಿರಸಿ ಮಾರಿಕಾಂಬಾ ದೇವಾಲಯದ ನಿಕಟಪೂರ್ವ ಅಧ್ಯಕ್ಷ ಡಾ. ವೆಂಕಟೇಶ ನಾಯ್ಕ ಅವರನ್ನು ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾದ ಬಗ್ಗೆ ಪರಿಷತ್‌ನ ಕಾರ್ಯಾಧ್ಯಕ್ಷ ಪ್ರೊ. ಹಿ.ಚಿ.ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬುಡಕಟ್ಟು, ಜಾನಪದ ಹಾಗೂ ಜನಾಂಗೀಯ ಅಧ್ಯಯನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಜಿಲ್ಲೆಯ ಗ್ರಾಮೀಣ ಜಾನಪದ ಸಂಸ್ಕೃತಿಯನ್ನು ಪೋಷಿಸುವ ಪರಂಪರೆಯ ಸಂವರ್ಧನೆ, ಪ್ರಸರಣ, ದಾಖಲಾತಿ ಮತ್ತು ಪ್ರಚಾರಗಳ ಪ್ರಮುಖ ಆಶಯವನ್ನು ಇರಿಸಿಕೊಂಡು ಜಾನಪದ ಕ್ಷೇತ್ರಕ್ಕೆ ಅಮೂಲ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಡಾ. ವೆಂಕಟೇಶ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಜಾನಪದ ಪರಿಷತ್ 1979 ರಿಂದ ಕನ್ನಡದ ಲೇಖಕರು ಜಾನಪದ ವಿದ್ವಾಂಸ, ನಿವೃತ್ತ ಐ.ಎ.ಎಸ್. ಅಧಿಕಾರಿ ನಾಡೋಜ ಎಚ್.ಎಲ್. ನಾಗೇಗೌಡರ ಆಸಕ್ತಿಯ ಫಲವಾಗಿ ಸ್ಥಾಪನೆಗೊಂಡಿದ್ದು ದೇಶದಲ್ಲಿಯೇ ಅತ್ಯಂತ ಅಪರೂಪದ ಜಾನಪದೀಯ ವೈಶಿಷ್ಟ್ಯಗಳಿಂದ ಕೂಡಿದ ಸಂಸ್ಥೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.