Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ
Team Udayavani, May 15, 2024, 8:45 PM IST
ಕೊಕ್ಕಡ: ಕೊಕ್ಕಡ ವೃತ್ತದಲ್ಲಿ ಮೇ 13ರಂದು ಸಂಜೆ ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸಿನಮಕ್ಕಿ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ ಯಾನೆ ಕಿಟ್ಟ (58) ಅವರಿಗೆ ಕುಮಾರ್ ಹಲ್ಲೆ ನಡೆಸಿದ್ದರಿಂದ ಬಿದ್ದು ಮೃತಪಟ್ಟಿದ್ದರು. ಘಟನೆ ಕುರಿತಂತೆ ಕೃಷ್ಣಪ್ಪ ಅವರ ಪತ್ನಿ ಭಾರತಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೇ 14ರಂದು ಅವರನ್ನು ಬಂಧಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ವಸಂತ ಆರ್. ಆಚಾರ್ ಮತ್ತು ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.