Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ
Team Udayavani, May 15, 2024, 11:27 PM IST
ಉಡುಪಿ: ಸ್ಫೂರ್ತಿಧಾಮ ದತ್ತು ಕೇಂದ್ರದಲ್ಲಿ ಅನಾಥ, ನಿರ್ಗತಿಕ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯವು ಆದೇಶಿಸಿದೆ. ಆರೋಪಿಗಳಾದ ಹನುಮಂತ ಮತ್ತು ಕೇಶವ ಕೋಟೇಶ್ವರ ಶಿಕ್ಷೆಗೆ ಒಳಗಾದವರು.
ಕುಂದಾಪುರದ ಸ್ಫೂರ್ತಿಧಾಮದಲ್ಲಿ ಹಲವಾರು ಬಾಲಕ, ಬಾಲಕಿಯರು ಪುನರ್ವಸತಿಯಲ್ಲಿದ್ದು, ಹನುಮಂತ (32) ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಶಾಲೆಯಲ್ಲಿ ಪರಿಚಯಿಸಿಕೊಂಡು ಪ್ರೀತಿಸುವುದಾಗಿ, ಮದುವೆಯಾಗಿ ನಂಬಿಸಿ ಆಕೆ ಶಾಲೆಗೆ ಹೋಗಿ ಬರುವಾಗ ಹಿಂಬಾಲಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. 2ನೇ ಆರೋಪಿ ಕೇಶವ ಕೋಟೇಶ್ವರನು ಈ ಸಂಸ್ಥೆಗೆ ಭೇಟಿ ನೀಡಿ ನೊಂದ ಬಾಲಕಿಗೆ ಮತ್ತು ಇನ್ನೋರ್ವ ಬಾಲಕಿಗೆ ದೈಹಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಅಂದಿನ ಡಿವೈಎಸ್ಪಿ ಟಿ.ಆರ್. ಜೈ ಶಂಕರ್‌ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಒಟ್ಟು 62 ಸಾಕ್ಷಿಗಳಲ್ಲಿ 37 ಸಾಕ್ಷಿಗಳ ವಿಚಾರಣೆ ಮಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪೋಕೊÕà ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರುಒಂದನೇ ಆರೋಪಿಗೆ ಅತ್ಯಾಚಾರ ಎಸಗಿದ್ದಕ್ಕೆ 10 ವರ್ಷಗಳ ಶಿಕ್ಷೆ ಮತ್ತು 20,000 ರೂ. ದಂಡ, ಅಪ್ರಾಪ್ತ ವಯಸ್ಸಿನ ಬಾಲಕಿಯ ಲೈಂಗಿಕ ದೌರ್ಜನ್ಯಕ್ಕೆ 10 ವರ್ಷ ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ..
ಒಟ್ಟು ದಂಡ 50,000 ರೂ. ನಲ್ಲಿ ಸರಕಾರಕ್ಕೆ 10 ಸಾವಿರ ಮತ್ತು 20000 ರೂ. ತಲಾ ನೊಂದ ಬಾಲಕಿಯರಿಗೆ ಪರಿಹಾರವಾಗಿ ನೀಡುವಂತೆ ಮತ್ತು ಸರಕಾರದಿಂದ ಇಬ್ಬರು ನೊಂದ ಬಾಲಕಿಯರಿಗೆ 2,00,000 ರೂ. ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ಪ್ರಕರಣದ ವಿಚಾರಣೆಯನ್ನು ವಿಶೇಷ ಸ. ಅಭಿಯೋಜಕ ವೈ.ಟಿ. ರಾಘವೇಂದ್ರ ನಡೆಸಿದ್ದು, ಸ. ಅಭಿಯೋಜಕ ಜಯರಾಮ್ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.