MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್
Team Udayavani, May 16, 2024, 7:20 AM IST
ಉಡುಪಿ: ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ. ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ. ಸಂಘದ ಹಿರಿಯರೂ ಆಯ್ತು ನೋಡೋಣ ಕೆಲಸ ಮಾಡಿ ಎನ್ನುವ ಅನಿ ವಾರ್ಯ ಸ್ಥಿತಿಯಲ್ಲಿ ಇದ್ದಾರೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್ ಹೇಳಿದರು.
ತಮ್ಮ ಮನೆಯಲ್ಲಿ ಬುಧವಾರ ನಡೆದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಇಂತಹ ದಿನ ಬರಲಿದೆ ಎಂದೂ ಯೋಚಿಸಿರಲಿಲ್ಲ. ಇದು ದುಡುಕಿನ ನಿರ್ಧಾರವಲ್ಲ; ಯೋಚಿಸಿಯೇ ತೆಗೆದುಕೊಂಡಿದ್ದು. ಕಣದಿಂದ ಹಿಂದೆ ಸರಿಯಲಾರೆ ಎಂದರು.
2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್ ಕೈತಪ್ಪಿದಾಗ ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು. ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ. ಲೋಕಸಭೆ ಚುನಾವಣೆಯಲ್ಲೂ ಪೂರ್ಣ ತೊಡಗಿಕೊಂಡೆ. ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು. ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು.
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ. ಮೋದಿಯವರ ಆದರ್ಶ, ಡಾ| ವಿ.ಎಸ್. ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು. ವಾಸುದೇವ್ ಭಟ್ ಪೆರಂಪಳ್ಳಿ ನಿರೂಪಿಸಿದರು.
ದೈವದ ಅಭಯ ನುಡಿ: ಮನೆಯಲ್ಲಿ ನಡೆದ ಕೋಲದ ಸಂದರ್ಭ ನನ್ನ ಸ್ಪರ್ಧೆಯ ಬಗ್ಗೆ ಕಲ್ಕುಡ, ಪಂಜುರ್ಲಿ ದೈವಗಳಲ್ಲಿ ಪ್ರಶ್ನೆ ಮಾಡಿದಾಗ “ನಿನ್ನ ನಿರ್ಧಾರ ಸರಿಯಾಗಿದೆ; ಮುಂದೆ ಸಾಗಬಹುದು’ ಎಂಬ ನುಡಿ ಸಿಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.