H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ
Team Udayavani, May 16, 2024, 9:55 PM IST
ಮೈಸೂರು: ಸಂಸದನಾಗಿದ್ದಾಗಲೇ ನನ್ನ ಸಂಪರ್ಕಕ್ಕೆ ಸಿಗದ ಪ್ರಜ್ವಲ್ ರೇವಣ್ಣ, ಈಗ ಸಿಗುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ಪ್ರಜ್ವಲ್ ನನ್ನ ಸಂಪರ್ಕದಲ್ಲಿಲ್ಲ. ಅವರು ಸಂಸದರಾಗಿದ್ದಲೂ ನನ್ನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹೀಗಿರುವಾಗ ಅವರು ವಿದೇಶಕ್ಕೆ ಹೋದ ಮೇಲೆ ಹೇಗೆ ನನ್ನ ಸಂಪರ್ಕದಲ್ಲಿ ಇರುತ್ತಾರೆ? ಪ್ರಜ್ವಲ್ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತನಿಖೆ ಸರಿಯಾಗಿ ನಡೆಯುತ್ತಿಲ್ಲ:
ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಎಸ್ಐಟಿಯನ್ನು ಕಾಣದ ಕೈಗಳು ನಿಯಂತ್ರಿಸುತ್ತಿವೆ. ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ಕೊಡದೆ, ಬೇರೆಯವರಿಗೆ ಮಾಹಿತಿ ನೀಡುತ್ತಿವೆ. ಇದರಿಂದ ಎಸ್ಐಟಿ ತನಿಖೆ ಸರಿಯಾಗಿ ಆಗುತ್ತಿಲ್ಲ. ಆದ್ದರಿಂದ ಎಸ್ಐಟಿ ಅಧಿಕಾರಿಗಳಿಗೆ ನಾನು ಮನವಿ ಮಾಡುತ್ತೇನೆ – ನಿಮ್ಮ ತಂದೆ, ತಾಯಿ, ಸಹೋದರ, ಸಹೋದರಿಯ ಮುಖ ನೋಡಿಕೊಂಡು ತನಿಖೆ ಮಾಡಿ. ಆ ಮೂಲಕ ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ ಎಂದರು.
ತಿಮಿಂಗಿಲ ಯಾರು ಎನ್ನುವುದು ಗೃಹ ಸಚಿವರಿಗೆ ಗೊತ್ತು: ಎಚ್ಡಿಕೆ:
ಮೈಸೂರು: ತಿಮಿಂಗಿಲ ಯಾರು ಅನ್ನೋದು ಗೃಹ ಸಚಿವ ಡಾ| ಜಿ.ಪರಮೇಶ್ವರ್ಗೆ ಚೆನ್ನಾಗಿ ಗೊತ್ತಿದೆ. ಆ ತಿಮಿಂಗಿಲವನ್ನು ಹಿಡಿಯುವುದು ಬಿಟ್ಟು ನನ್ನನ್ನು ಕೇಳಿದರೆ ಹೇಗೆ? ಅವರದ್ದೇ ಪಕ್ಷದ ಮಂಡ್ಯ ಶಾಸಕ ಒಂದು ವಾರದಲ್ಲಿ ತಿಮಿಂಗಲ ಸಿಗುತ್ತೆ ಎಂದಿದ್ದರು. ಅದು ಈಗ ಏನಾಯಿತು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್ಐಟಿ ಅಧಿಕಾರಿಗಳು ಅನಾವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದ್ದಾರೆ. ದೇವೇರಾಜೇ ಗೌಡರ ಪ್ರಕರಣ ದಾಖಲಾಗಿ ಒಂದು ತಿಂಗಳ ಬಳಿಕ ಅವರನ್ನು ಬಂಧಿಸಿದ್ದು ಯಾಕೆ? ಅವರಿಂದ ಎಸ್ಐಟಿಗೆ ಏನು ಮಾಹಿತಿ ಬೇಕಿದೆ? ಪ್ರಜ್ವಲ್ ವೀಡಿಯೋ ವೈರಲ್ ಮಾಹಿತಿಯೇ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯೇ ಅಥವಾ ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆ ಆದ ಬಗ್ಗೆ ಮಾಹಿತಿಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.