ISIS case: ಅಮ್ಮರ್ ಅಬ್ದುಲ್ಗೆ ಜಾಮೀನು
Team Udayavani, May 17, 2024, 10:42 AM IST
ಉಳ್ಳಾಲ: ಮಾಜಿ ಶಾಸಕ ದಿ| ಇದಿನಬ್ಬ ಅವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ಗೆ ದಿಲ್ಲಿ ಹೈಕೋರ್ಟ್ ಜಾಮೀನು ನೀಡಿದೆ.
ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ್ಮರ್ ಅಬ್ದುಲ್ ರೆಹಮಾನ್ನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಗಸ್ಟ್ 21, 2021ರಂದು ಬಂಧಿಸಿತ್ತು. ಆರೋಪಿಯ ಮೊಬೈಲ್ ಮತ್ತು ಲ್ಯಾಪ್ಟಾಪ್ನಲ್ಲಿ ಉಸಾಮ ಬಿನ್ ಲಾದನ್ ಚಿತ್ರಗಳು, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸೇರಿದಂತೆ ಕೆಲವೊಂದು ಪುರಾವೆಗಳು ಸಿಕ್ಕಿದ್ದವು. ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಅಮ್ಮರ್ ಅಬ್ದುಲ್ ರೆಹಮಾನ್ಗೆ ವಿಚಾರಣಾ ಧೀನ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಸದ್ಯ ಸುದೀರ್ಘ ವಿಚಾರಣೆ ಬಳಿಕ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.