Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ದಾವಣಗೆರೆ ರೈಲ್ವೆ ಪೊಲೀಸರು ತೋರಿದ ಸಮಯಪ್ರಜ್ಞೆ
Team Udayavani, May 17, 2024, 2:41 PM IST
ದಾವಣಗೆರೆ: ಹುಬ್ಬಳ್ಳಿಯ ಅಂಜಲಿ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಚಿಗಟೇರಿ ಆಸ್ಪತ್ರೆಯಿಂದ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದು ಬೆಳಕಿಗೆ ಬಂದಿದೆ.
ವಿಶ್ವ ಮಾನವ ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯತ್ತ ತೆರಳುತ್ತಿದ್ದ ವಿಶ್ವ ಅದೇ ರೈಲಿನಲ್ಲಿದ್ದ ಗದಗ ಜಿಲ್ಲೆಯ ಕಲ್ಲುಮುಳಗುಂದ ಗ್ರಾಮದ ಲಕ್ಷ್ಮಿಎಂಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಚಾಕುವಿನಿಂದ ಚುಚ್ಚಿ ಕೊಲೆಗೂ ಯತ್ನಿಸಿದ್ದ.
ಮಹಿಳೆಯ ಚೀರಾಟದಿಂದ ಎಚ್ಚೆತ್ತ ಪ್ರಯಾಣಿಕರು, ಮಹಿಳೆಯ ಪತಿ ಇತರರು ವಿಶ್ವನನ್ನು ಹಿಡಿದು ಥಳಿಸಿದ್ದರು. ಪೊಲೀಸರಿಗೆ ಹಿಡಿದು ಕೊಡಬಹುದು ಇಲ್ಲವೇ ಸಿಕ್ಕಿ ಬೀಳಬಹುದು ಎಂಬ ಭಯದಿಂದ ಮಾಯಕೊಂಡ ಸಮೀಪ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿದಾಗ ತಲೆಗೆ ತೀವ್ರ ಪೆಟ್ಟು ಬಿದ್ದು ಹಳಿಗಳ ಸಮೀಪವೇ ಬಿದ್ದಿದ್ದನು.
ರೈಲಿನಿಂದ ಜಿಗಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರೈಲಿನಿಂದ ಇಳಿಯುವಾಗ ಜಾರಿ ಬಿದ್ದೆ ಎಂಬ ಹೇಳಿಕೆ ನೀಡಿದ್ದಾನೆ. ವಿಶ್ವ ಮಾನವ ಎಕ್ಸ್‌ಪ್ರೆಸ್ ರೈಲು ಚಿಕ್ಕಜಾಜೂರು ನಂತರ ದಾವಣಗೆರೆಯಲ್ಲಿ ಮಾತ್ರ ನಿಲುಗಡೆ ಇದೆ. ಅದು ಯಾವಾಗ ರೈಲಿನಿಂದ ಇಳಿಯಲಿಕ್ಕೆ ಹೋಗಿರಬಹುದು ಎಂಬ ಅನುಮಾನ ಪೊಲೀಸರಿಗೆ ಕಾಡಿದೆ.
ಮಾಧ್ಯಮಗಳಲ್ಲಿ ಬಿತ್ತರವಾದ ಆರೋಪಿಯ ಫೋಟೋ ನೋಡಿದ್ದರಿಂದಲೂ ಹುಬ್ಬಳ್ಳಿಯ ಕೊಲೆ ಆರೋಪಿ ಏನಾದರೂ ಇರಬಹುದಾ ಎಂಬ ಸಂಶಯವೂ ಬಂದಿದೆ. ಅದೇ ಸಂಶಯದ ಮೇಲೆ ರೈಲ್ವೆ ಪೊಲೀಸರು ಮತ್ತೊಮ್ಮೆ ಆರೋಪಿ ವಿಶ್ವನನ್ನು ದಾಖಲಿಸಿದ್ದ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಬರುವ ವೇಳೆಗೆ ಆರೋಪಿ ಆಗಲೇ ಆಸ್ಪತ್ರೆಯಿಂದ ಹೊರ ಬಂದಿದ್ದನು.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿಶ್ವನನ್ನು ವಶಕ್ಕೆ ತೆಗೆದುಕೊಂಡು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಾವಣಗೆರೆಗೆ ಆಗಮಿಸಿದ ಹುಬ್ಬಳ್ಳಿ ಪೊಲೀಸರು ಅಂಜಲಿ ಕೊಲೆ ಆರೋಪಿ ಇವನೇ ಎಂಬುದನ್ನು ಖಚಿತಪಡಿಸಿ ಕೊಂಡು ಬಂಧಿಸಿ, ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.
ದಾವಣಗೆರೆ ರೈಲ್ವೆ ಪೊಲೀಸರು ತೋರಿದ ಸಮಯಪ್ರಜ್ಞೆಯಿಂದ ಅಂಜಲಿ ಅಂಬಿಗೇರ ಕೊಲೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.