ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?
Team Udayavani, May 17, 2024, 3:14 PM IST
ಚೆನ್ನೈ: ಕಾಲಿವುಡ್ ನಟ ಸೂರ್ಯ ಅವರ ʼಕಂಗುವʼ ಸಿನಿಮಾದ ಬಗ್ಗೆ ಪ್ಯಾನ್ ಇಂಡಿಯಾದಲ್ಲಿ ಕ್ರೇಜ್ ಶುರುವಾಗಿದೆ. ಇದಾದ ಬಳಿಕ ಸೂರ್ಯ ಮತ್ತೊಬ್ಬ ಖ್ಯಾತ ನಿರ್ದೇಶಕನೊಂದಿಗೆ ಸಿನಿಮಾ ಮಾಡಲಿದ್ದಾರೆ.
ಕಾಲಿವುಡ್‌ನ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಕಳೆದ ವರ್ಷ ʼಜಿಗರ್ತಾಂಡ ಡಬಲ್ಎಕ್ಸ್ʼ ಸಿನಿಮಾ ಮಾಡಿದ್ದರು. ಈ ಸಿನಿಮಾ ಕಾಲಿವುಡ್ ನಲ್ಲಿ ಹಿಟ್ ಸಾಲಿಗೆ ಸೇರಿತ್ತು. ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಕಾರ್ತಿಕ್ ಸುಬ್ಬರಾಜ್ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದರು.
ನಟ ಸೂರ್ಯ ಅವರೊಂದಿಗೆ ಇದೇ ಮೊದಲ ಬಾರಿಗೆ ಕಾರ್ತಿಕ್ ಸುಬ್ಬರಾಜ್ ಸಿನಿಮಾ ಮಾಡುತ್ತಿದ್ದಾರೆ. ಈ ಸುದ್ದಿ ಹೊರಬಂದ ಬಳಿಕ ಕಾಲಿವುಡ್ ವಲಯದಲ್ಲಿ ಕ್ರೇಜ್ ಹೆಚ್ಚಾಗಿದೆ. ʼಸೂರ್ಯ 44ʼ ಎನ್ನುವ ತಾತ್ಕಾಲಿಕ ಟೈಟಲ್ ನ್ನು ಸಿನಿಮಾಕ್ಕೆ ಇಡಲಾಗಿದೆ.
ಇದೀಗ ಬಹುಭಾಷಾ ನಟಿಯೊಬ್ಬರು ಸೂರ್ಯ ಅವರ ಸಿನಿಮಾಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪ್ರಭಾಸ್ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್ʼ ನಟ?
ಖ್ಯಾತ ನಟಿ ಪೂಜಾ ಹೆಗ್ಡೆ ಇದೇ ಮೊದಲ ಬಾರಿಗೆ ಸೂರ್ಯ ಹಾಗೂ ಕಾರ್ತಿಕ್ ಸುಬ್ಬರಾಜ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ. ಆ ಮೂಲಕ ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗಿದೆ.
ಇದಲ್ಲದೆ ಈ ಸಿನಿಮಾದಲ್ಲಿ ಸೂರ್ಯ ಅವರ ಜೊತೆಗೆ ಮಲಯಾಳಂ ನಟ ಜೋಜು ಜಾರ್ಜ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಜೂನ್ 2 ರಿಂದ ಚಿತ್ರೀಕರಣ ಆರಂಭಗೊಳ್ಳಲಿದ್ದು, ಅಂಡಮಾನ್‌ನಲ್ಲಿ 40-ದಿನ ಶೆಡ್ಯೂಲ್ ಹಾಕಿಕೊಳ್ಳಲಾಗಿದೆ. ಉಳಿದ ಚಿತ್ರೀಕರಣಕ್ಕಾಗಿ ಊಟಿ ಮತ್ತು ಇತರ ಸ್ಥಳಗಳಿಗೆ ತೆರಳುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.