Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Team Udayavani, May 17, 2024, 6:10 PM IST
ಸಾಗರ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯದ್ದು ತಿರುಕನ ಕನಸು. ನಾವು 135 ಶಾಸಕರು ಗಟ್ಟಿಯಾಗಿದ್ದೇವೆ. ಎಷ್ಟು ಬಿಟ್ಟಿ ದುಡ್ಡು ತರುತ್ತೀರಿ ತನ್ನಿ. ನಮ್ಮ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ತೆಗೆಯುತ್ತೇವೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅದು ಕನಸಾಗಿ ಉಳಿಯುತ್ತದೆಯೇ ವಿನಃ ನನಸಾಗುವುದಿಲ್ಲ. ಕಾಂಗ್ರೆಸ್ನಲ್ಲಿ ಯಾವುದೇ ಬಂಡಾಯ ಇಲ್ಲ. ಹಾಗೆ ನೋಡಿದರೆ ಬಿಜೆಪಿಯಲ್ಲೇ ದೊಡ್ಡ ಮಟ್ಟದ ಬಂಡಾಯ ಇದೆ. ನಮ್ಮಲ್ಲಿನ ಬಂಡಾಯವನ್ನು ಸರಿಪಡಿಸಿಕೊಳ್ಳುತ್ತೇವೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ನಮ್ಮ ವರಿಷ್ಠರು ನೋಡಿಕೊಳ್ಳುತ್ತಾರೆ. ಪಕ್ಷದಲ್ಲಿ ಅಸಮಾಧಾನ ಇದ್ದರೂ ಅವೆಲ್ಲ ತಾತ್ಕಾಲಿಕ. ಅಧಿ ಕಾರದಲ್ಲಿದ್ದಾಗ ಇವೆಲ್ಲಾ ಸಹಜ. ಎಲ್ಲವೂ ಸರಿಯಾಗುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಪದವೀಧರರು ಮತ್ತು ಶಿಕ್ಷಕರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುವ ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರ ಅ ಧಿಕಾರದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಎರಡೂ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಹೆಚ್ಚು ಗಮನ ಹರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.