Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಬಿಜೆಪಿ ಸರಕಾರವಿದ್ದಾಗ ಕೊಲೆ, ರೇಪ್ ಆಗಿಲ್ವಾ ?
Team Udayavani, May 17, 2024, 5:22 PM IST
ಕೊಪ್ಪಳ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರವು ಅಸಹಕಾರ ತೋರುತ್ತಿದೆ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ಸರ್ಕಾರ ಈಗಾಗಲೇ ತನಿಖೆ ಆರಂಭಿಸಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು ವಿದೇಶದಿಂದ ಕರೆತಂದು ಬಂಧಿಸಲು ಕೇಂದ್ರ ಸಹಕಾರ ಕೊಡಬೇಕಿದೆ. ಅವರಿಂದಲೇ ನಮಗೆ ಸಹಕಾರ ಸಿಗುತ್ತಿಲ್ಲ ಎಂದರು.
ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂಬ ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆ ವಿಚಾರ, ಬಿಜೆಪಿಗೆ ಸ್ವಂತ ಬಲದ ಮೇಲೆ ಗೆದ್ದ ಉದಾಹರಣೆಯಿಲ್ಲ. ರಾಜ್ಯದಲ್ಲಿ ಸಿಂಧೆಯಂಥ ಯಾರೂ ಇಲ್ಲ. ಈ ಬಾರಿ ರಾಜ್ಯದಲ್ಲಿ ಅಂತಹ ಪರಸ್ಥಿತಿ ನಿರ್ಮಾಣವಾಗಲ್ಲ. ಬಿಜೆಪಿಯವರು ಸುಳ್ಳುಗಾರರು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂಬುದು ರಾಜ್ಯ ಹಾಗೂ ದೇಶದಲ್ಲಿ ಗೊತ್ತಿದೆ. ಅವರು ಸುಳ್ಳು ಹೇಳುತ್ತಾರೆ ಎಂಬುದಕ್ಕೆ ನಾನೇ ಉದಾಹರಣೆ. ಬಿಜೆಪಿ ಸರಕಾರ ಮಾಡುವಾಗ ಏನ್ ಬೇಕಾದರೂ ಸುಳ್ಳು ಹೇಳಿ ಕರೆದುಕೊಂಡು ಹೋಗುತ್ತಾರೆ. ಆದರೆ ಯಾವ ಆಸೆಗಳನ್ನು ಈಡೇರಿಸುವುದಿಲ್ಲ. ನಮ್ಮ ಪಕ್ಷದ ಶಾಸಕರು ಹೋಗೋದಿಲ್ಲ. ಬಿಜೆಪಿಯವರು ಹಗಲುಗನಸು ಕಾಣೋದನ್ನು ಬಿಡಲಿ. ಯಾವುದೇ ಕಾರಣಕ್ಕೂ ಸರಕಾರ ಬದಲಾಗಲ್ಲ. ಶಿಂಧೆ ಹೇಳಿದರೂ ಅಷ್ಟೆ, ಮೋದಿ ಹೇಳಿದರೂ ಅಷ್ಟೆ ನಮ್ಮ ಸರಕಾರ ಬೀಳೋದಿಲ್ಲ ಎಂದರು.
ಬಿಜೆಪಿ ಸರಕಾರವಿದ್ದಾಗ ಕೊಲೆ, ರೇಪ್ ಆಗಿಲ್ವಾ ?
ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ವಿಚಾರ, ಇಂತಹ ಘಟನೆಗಳು ಆಗಬಾರದು. ಇಂತಹ ಘಟನೆಗಳನ್ನು ಖಂಡಿಸುತ್ತೇವೆ. ಅಂತಹವರ ಮೇಲೆ ಕ್ರಮ ವಹಿಸುತ್ತೇವೆ. ಕೆಲವೊಂದಿಷ್ಟು ಜನರು ದುಷ್ಟತನಕ್ಕೆ ಇಳಿದಿದ್ದಾರೆ.
ದುಷ್ಟರನ್ನು ಮಟ್ಟಹಾಕಲು ಸರ್ಕಾರ ಚರ್ಚೆ ನಡೆಸಿದೆ. ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಚರ್ಚೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ನಾವಾಗಲಿ, ಸರಕಾರವಾಗಲಿ ಸಹಿಸಿಕೊಳ್ಳುವುದಿಲ್ಲ. ಯುವತಿ ಕುಟುಂಬ ಮೊದಲೇ ದೂರು ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿ ವಿರುದ್ಧ ಸರಕಾರ ಈಗಾಗಲೇ ಕ್ರಮಕೈಗೊಂಡಿದೆ ಎಂದರಲ್ಲದೇ ಬಿಜೆಪಿ ಸರಕಾರವಿದ್ದಾಗಲೂ ಕೊಲೆಗಳಾಗಿವೆ. ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೊಲೆ, ರೇಪ್‌ಗಳು ಆಗಿಲ್ಲವಾ ? ಅವರ ಕಾಲದಲ್ಲಿ ಇಂತಹ ಘಟನೆಗಳು ನಡೆದಿವೆ ಎಂದ ಮಾತ್ರ ನಾವು ಅದನ್ನು ಸಮರ್ಥಿಸಿಕೊಳ್ಳುತ್ತೇವೆ ಎಂದಲ್ಲ. ಇಂತಹ ದುಷ್ಟರು ಎಲ್ಲ ಕಾಲದಲ್ಲೂ ಇರುತ್ತಾರೆ. ಅವರನ್ನು ಮಟ್ಟ ಹಾಕುವ ಕೆಲಸ ಮಾಡುತ್ತೇವೆ. ನಮ್ಮ ಕರ್ನಾಟಕ ಪೊಲೀಸ್ ಸ್ಟ್ರಾಂಗ್ ಇದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.