Legislative Council Election; 5 ಕ್ಷೇತ್ರದ 76 ಅಭ್ಯರ್ಥಿಗಳ ನಾಮಪತ್ರ ಸಿಂಧು
ದಾಖಲೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
Team Udayavani, May 18, 2024, 7:05 AM IST
ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಲ್ಲಿಸಲಾದ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆದಿದ್ದು ತಾಂತ್ರಿಕ ಕಾರಣಗಳಿಂದಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ. ಹೀಗಾಗಿ 5 ಕ್ಷೇತ್ರಗಳ 76 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 41 ನಾಮಪತ್ರಗಳ ಪೈಕಿ 7 ನಾಮಪತ್ರಗಳು ತಿರಸ್ಕೃತಗೊಂಡಿದ್ದು 26 ಅಭ್ಯರ್ಥಿಗಳ 34 ನಾಮಪತ್ರ ಅಂಗೀಕರಿಸಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳ 34 ನಾಮಪತ್ರಗಳಲ್ಲಿ 11 ತಿರಸ್ಕಾರಗೊಂಡಿದ್ದು 16 ಅಭ್ಯರ್ಥಿಗಳ 23 ನಾಮಪತ್ರಗಳು ಪುರಸ್ಕೃತಗೊಂಡಿವೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳ 18 ನಾಮಪತ್ರಗಳ ಪೈಕಿ 1 ತಿರಸ್ಕರಿಸಲಾಗಿದ್ದು 9 ಅಭ್ಯರ್ಥಿಗಳ 17 ನಾಮಪತ್ರಗಳು ಪುರಸ್ಕೃತಗೊಂಡಿವೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳ 22 ನಾಮಪತ್ರಗಳ ಪೈಕಿ ಯಾವುದೇ ನಾಮಪತ್ರ ತಿರಸ್ಕಾರಗೊಂಡಿಲ್ಲ. 12 ಅಭ್ಯರ್ಥಿಗಳ ಎಲ್ಲÉ 22 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳ ಎಲ್ಲ 19 ನಾಮಪತ್ರಗಳು ಅಂಗೀಕಾರಗೊಂಡಿದ್ದು ಯಾವುದೇ ನಾಮಪತ್ರ ತಿರಸ್ಕೃತಗೊಂಡಿಲ್ಲ.
ಚುನಾವಣೆ ನಡೆಯಲಿರುವ ಆರು ಕ್ಷೇತ್ರಗಳಲ್ಲಿ 103 ಅಭ್ಯರ್ಥಿಗಳಿಂದ 156 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಶುಕ್ರವಾರ ನಡೆದ ಐದು ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆಯಲ್ಲಿ ಒಟ್ಟು 76 ಅಭ್ಯರ್ಥಿಗಳ 115 ನಾಮಪತ್ರಗಳನ್ನು ಸಿಂಧು ಎಂದು ಘೋಷಿಸಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದರು. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಕೆಲವು ದಾಖಲೆ ಸಲ್ಲಿಸಲು ಕಾಲಾವಕಾಶ ಕೇಳಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.