Re Release; ಭರ್ಜರಿ ಓಪನಿಂಗ್ ಪಡೆದ ಉಪ್ಪಿ ‘ಎ’
Team Udayavani, May 18, 2024, 11:00 AM IST
ತುಂಬಾ ದಿನಗಳ ನಂತರ ಚಿತ್ರಮಂದಿರದೊಳಗೆ ಮತ್ತೆ ಶಿಳ್ಳೆ, ಚಪ್ಪಾಳೆ, ಜೈಕಾರ ಕೇಳಿಬಂದಿದೆ. ಹಾಡು ಬಂದಾಗ ಸ್ಕ್ರೀನ್ ಮುಂದೆ ಅಭಿಮಾನಿಗಳು ಕುಣಿದಿದ್ದಾರೆ. ನಾಯಕನ ಎಂಟ್ರಿಗೆ ದೀಪ ಬೆಳಗಾಗಿದ್ದಾರೆ. ಪಂಚ್ ಡೈಲಾಗ್‌ಗೆ ಕೇಕೆ ಹಾಕಿ ಸಂಭ್ರಮಿಸಿದ್ದಾರೆ. ಇದಕ್ಕೆಲ್ಲಾ ಕಾರಣವಾಗಿದ್ದು “ಎ’ ಸಿನಿಮಾ.
ಉಪೇಂದ್ರ ನಿರ್ದೇಶನ, ನಟನೆಯ “ಎ’ ಚಿತ್ರ ಶುಕ್ರವಾರ ಮರುಬಿಡುಗಡೆಯಾಗಿದೆ. ಸಾಮಾನ್ಯವಾಗಿ ಮರುಬಿಡುಗಡೆ ಎಂದಾಗ ದೊಡ್ಡ ಮಟ್ಟದ ಓಪನಿಂಗ್ ಸಿಗುವುದಿಲ್ಲ ಎಂಬ ಮಾತಿದೆ. ಆದರೆ, “ಎ’ ಚಿತ್ರ ಆ ಮಾತನ್ನು ಸುಳ್ಳು ಮಾಡಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣವಿದ್ದರೂ ಸಿನಿಮಾ ಪ್ರೇಮಿಗಳು ಮಾತ್ರ ನಗರದ ನರ್ತಕಿ ಸೇರಿದಂತೆ ಬೇರೆ ಬೇರೆ ಚಿತ್ರಮಂದಿರಗಳ ಮುಂದೆ ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನ ಸೂಪರ್ ಹಿಟ್ ಸಿನಿಮಾವನ್ನು ಮತ್ತೂಮ್ಮೆ ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಮಿಸ್ ಮಾಡಿಲ್ಲ. ಅದೇ ಕಾರಣದಿಂದ “ಎ’ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.
ಉಪೇಂದ್ರ ನಿರ್ದೇಶನದ ಜೊತೆಗೆ ನಾಯಕರಾಗಿರುವ “ಎ’ ಚಿತ್ರ 1998ರಲ್ಲಿ ತೆರೆಕಂಡು ದೊಡ್ಡ ಹಿಟ್ ಆಗಿತ್ತು. ಚಿತ್ರದ ಕಥೆಯ ಜೊತೆಗೆ ಹಾಡುಗಳು ಪ್ರೇಕ್ಷಕರನ್ನು ರಂಜಿಸಿದ್ದವು. ಅಂದಿನ ಕಾಲಕ್ಕೆ ಆ ಚಿತ್ರ ಹೊಸ ಕಾನ್ಸೆಪ್ಟ್ನಿಂದ ಸಿನಿಪ್ರೇಮಿಗಳ ಹುಬ್ಬೇರಿಸಿದ್ದು ಸುಳ್ಳಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.