Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
Team Udayavani, May 19, 2024, 1:34 AM IST
ಉಪ್ಪಿನಂಗಡಿ: ಇಲ್ಲಿನ ನೆಲ್ಯಾಡಿ ಗ್ರಾಮದ ತೋಟಮನೆ ನಿವಾಸಿ ಧನಂಜಯ ಗೌಡ (43) ಅವರು ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಿಸಲ್ಪಟ್ಟವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಕಳೆದ ಮೇ 11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಅವರ ತೋಟಕ್ಕೆ ಕೃಷಿ ಕೆಲಸಕ್ಕೆಂದು ಹೋದವರು, ತೆಂಗಿನ ಮರವನ್ನೇರಿದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಸುಧಾರಣೆ ಕಾಣಿಸದೇ ಇದ್ದಾಗ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರ ಪತ್ನಿ ಚಿತ್ರಕಲಾ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.