Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ
ಅತ್ತಿಕುಪ್ಪೆಯಲ್ಲಿ ಕೆರೆಕೋಡಿ ಒಡೆದು ಬೆಳೆನಾಶ, ಕೊಚ್ಚಿಹೋದ ತೆಂಗಿನ ಸಸಿಗಳು
Team Udayavani, May 20, 2024, 8:22 PM IST
ಹುಣಸೂರು:ತಾಲೂಕಿನಾದ್ಯಂತ ಮಳೆ ಸೋಮವಾರವೂ ಮುಂದುವರೆದಿದ್ದು, ತಂಬಾಕು ಹದ ಮಾಡುವ ಎರಡು ಬ್ಯಾರನ್ ಹಾಗೂ ಮನೆಯೊಂದು ಕುಸಿದು ಬಿದ್ದ ಘಟನೆ ಸೋಮವಾರ ನಡೆದಿದೆ.
ಮಳೆಯ ಅಬ್ಬರಕ್ಕೆ ಕೆರೆಯೊಂದರ ಕೋಡಿ ಒಡೆದಿದೆ. ತಂಬಾಕು ಹಾಗೂ ಶುಂಠಿ ಹೊಲಗಳಲ್ಲಿ ಅಪಾರ ಪ್ರಮಾಣದ ನೀರು ನಿಂತಿದ್ದು, ಬೆಳೆಗಳು ಕೊಳೆಯುವ ಭೀತಿ ಎದುರಾಗಿದೆ.
ಹನಗೋಡು ಹೋಬಳಿಯ ಕಚುವಿನಹಳ್ಳಿ ಗ್ರಾಮದ ಲೇ.ಜವರೇಗೌಡರ ಪತ್ನಿ ಜಯಮ್ಮ ಮತ್ತು ಹರೀನಹಳ್ಳಿಯ ರುದ್ರಾರಾಧ್ಯರ ಪತ್ನಿ ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಕಟ್ಟಡದ ಗೋಡೆ ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಅರಸುಕಲ್ಲಹಳ್ಳಿಯ ಕುಮಾರ್‌ರಿಗೆ ಸೇರಿದ ಮನೆ ಬಿದ್ದು ಹೋಗಿದೆ.
ಹಾರಿ ಹೋದ ಮೇಲ್ಛಾವಣಿ:
ಚಿಲ್ಕುಂದದಲ್ಲಿ ಸೋಮವಾರ ಸಂಜೆ ಬೀಸಿದ ಬಿರುಗಾಳಿಗೆ ರಾಮಶೆಟ್ಟರ ಮನೆ ಮೇಲ್ಛಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದ್ದು ಮನೆಯೊಳಗಿದ್ದ ದವಸ, ಧಾನ್ಯ, ಬಟ್ಟೆ, ಮತ್ತಿತರ ಪದಾರ್ಥಗಳು ನೀರಿನಲ್ಲಿ ತೋಯ್ದು ಹಾಳಾಗಿದೆ.
ಜೋಳದ ಬಿತ್ತನೆ ನಾಶ:
ಗುರುಪುರ ಗ್ರಾ.ಪಂ.ವ್ಯಾಪ್ತಿಯ ಕಾಳೇನಹಳ್ಳಿಯ ತಗ್ಗುಪ್ರದೇಶದ ಜಮೀನುಗಳಲ್ಲಿ ಅಪಾರ ಪ್ರಮಾಣದ ಮಳೆ ನೀರು ನಿಂತಿದ್ದು, ಇತ್ತೀಚೆಗೆ ಬಿತ್ತನೆ ಮಾಡಿದ್ದ ನಟೇಶ್, ಶ್ರೀನಿವಾಸ್, ಆನಂದ, ಕಲೀಂ ಮತ್ತಿತರ ರೈತರಿಗೆ ಸೇರಿದ ಮುಸುಕಿನ ಜೋಳ ಹಾಗೂ ರಸಗೊಬ್ಬರ ಸಹಿತ ನೀರುಪಾಲಾಗಿದೆ.
ಕೋಡಿ ಒಡೆದ ಅತ್ತಿಕುಪ್ಪೆ ಕೆರೆ:
ಅತ್ತಿಕುಪ್ಪೆಯ 7ಎಕರೆ ವಿಸ್ತೀರ್ಣದ ಸರಕಾರಿ ಕೆರೆಯ ಕೋಡಿ ಒಡೆದು ಅಪಾರ ಪ್ರಮಾಣದ ನೀರು ಜಮೀನಿನ ಮೇಲೆ ಹರಿದಿದ್ದು, ಕೆರೆ ಕೆಳಬಾಗದ ಅಡಿಕೆ, ತೆಂಗಿನ ತೋಟ, ಶುಂಠಿ, ತಂಬಾಕು ಜಮೀನು ಜಲಾವೃತವಾಗಿದ್ದು, ಕಣ್ಣು ಹಾಯಿಸಿದೆಲ್ಲೆಡೆ ಜಮೀನು ಕೆರೆಗಳಂತೆ ಗೋಚರಿಸುತ್ತಿವೆ.
ಕಂದಾಯಾಧಿಕಾರಿಗಳ ಭೇಟಿ:
ಹನಗೋಡು ನಾಡಕಚೇರಿಯ ರಾಜಸ್ವ ನಿರೀಕ್ಷಕ ಪ್ರಶಾಂತರಾಜೇಅರಸ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಅಂತೋಣಿರಾಜ್, ಮಲ್ಲೇಶ್, ಸುಮಂತ್‌ರವರು ಅತ್ತಿಕುಪ್ಪೆಯ ಕೆರೆ ಕೋಡಿ ಒಡೆದು ಹಾನಿಗೊಳಗಾಗಿರುವ ಪ್ರದೇಶ ಹಾಗೂ ಕಲ್ಲಹಳ್ಳಿ, ತಟ್ಟೆಕೆರೆ, ಹೊಸಕೋಟೆ, ಕಚುವಿನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ, ಮನೆ, ಬ್ಯಾರನ್ ಹಾನಿ ಪರಿಶೀಲಿಸಿದರು.
ಇಷ್ಟೊಂದು ಬೆಳೆ ನಷ್ಟವಾಗಿದ್ದರೂ ಯಾವುದೇ ಜನಪ್ರತಿನಿಧಿಗಳಾಗಲಿ ಹಿರಿಯ ಅಧಿಕಾರಿಗಳಾಗಲಿ ಹಾನಿ ಪ್ರದೇಶಕ್ಕೆ ಭೇಟಿ ನೀಡದಿರುವುದು ರೈತರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.