Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
Team Udayavani, May 21, 2024, 2:36 PM IST
ಹಾಸನ: ಅತ್ಯಾಚಾರ ಸಂತ್ರಸ್ತ ಮಹಿಳೆಯ ಕಿಡ್ನಾಪ್, ಮನೆ ಕೆಲಸದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಗಳಲ್ಲಿ ಜಾಮೀನು ಪಡೆದು ನಿರಾಳರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ 20 ದಿನಗಳ ನಂತರ ತವರಿಗೆ ಆಗಮಿಸುತ್ತಿದ್ದಾರೆ.
ತಮ್ಮ ಕುಟುಂಬದ ಆರಾಧ್ಯದೈವ್ಯ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ, ಕುಲದೈವ ಹರದನಹಳ್ಳಿಯ ದೇವೇಶ್ವರ, ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಿಗೆ ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ.
ಜೈಲಿನಿಂದ ಹೊರಬಂದ ದಿನವೇ ತವರೂರಿಗೆ ಹೊರಟಿದ್ದ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಹೋಗುವುದು ಬೇಡ ಎಂದು ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ತಡೆದಿದ್ದರು.
ಇಂದು ಮನೆದೇವರಿಗೆ ಪೂಜೆ ಸಲ್ಲಿಸಲು ದೇವೇಗೌಡರಿಂದ ಅನುಮತಿ ಪಡೆದಿರುವ ಪುತ್ರ ಎಚ್.ಡಿ.ರೇವಣ್ಣ ಅವರಿಗೆ ಎಲ್ಲಿಯೂ ಕೂಡ ಏನನ್ನೂ ಮಾತನಾಡದಂತೆ ಅವರುಸೂಚನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಗಡಿಭಾಗ ಕಿರಿಸಾವೆಯಲ್ಲಿ ಎಚ್.ಡಿ.ರೇವಣ್ಣಗೆ ಸ್ವಾಗತ ಕೋರಲು ಜೆಡಿಎಸ್ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಆದರೆ ಯಾರೂ ಹಾರ-ತುರಾಯಿ ಹಾಕುವುದಾಗಲೀ, ಪಟಾಕಿ ಸಿಡಿಸುವುದು ಬೇಡ ಎಂದು ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಎಚ್.ಡಿ.ರೇವಣ್ಣ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.