Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು
Team Udayavani, May 21, 2024, 9:22 PM IST
ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರೊಂದು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಮರಕನಹಳ್ಳಿ ನಿವಾಸಿ ವಿರೂಪಾಕ್ಷ (40) ಮೃತಪಟ್ಟವರು.
ಮೃತರು ತನ್ನ ಸ್ನೇಹಿತರಾದ ಯೋಗೇಶ್, ಸಂತೋಷ್, ಸ್ವಾಮಿ, ಶಿವಕುಮಾರ್, ನಾಗೇಶ್, ವಿರುಪಾಕ್ಷ, ದ್ವಾರಕೇಶ್ ಅವರೊಂದಿಗೆ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಿವಕುಮಾರ್ ಅವರ ವಾಹನದಲ್ಲಿ ಬೆಂಗಳೂರಿನಿಂದ ಹೊರಟು ಧರ್ಮಸ್ಥಳಕ್ಕೆ ಬಂದು ಅಲ್ಲಿ ರವಿವಾರ ರಾತ್ರಿ ಉಳಿದುಕೊಂಡಿದ್ದರು.
ಸೋಮವಾರ ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದಾಗ ಕಿದು ಎಂಬಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ವಿರುಪಾಕ್ಷ ಅವರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಸಹ ಪ್ರಯಾಣಿಕ ಯೋಗೀಶ್ ನೀಡಿದ ದೂರಿನಂತೆ ಸಂತೋಷ್ನ ವಿರುದ್ದ ಕಡಬ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.