Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ
Team Udayavani, May 22, 2024, 12:18 AM IST
ವಿಟ್ಲ: ಭಾರೀ ಗಾಳಿ-ಮಳೆಗೆ ರಸ್ತೆ ಬದಿಯ ದೊಡ್ಡ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟಿನಲ್ಲಿ ಮಂಗಳವಾರ ಸಂಭವಿಸಿದೆ.
ಗಾಯಗೊಂಡವರು ಮಂಗಳೂರು ಹಂಪನಕಟ್ಟೆ ನಿವಾಸಿಗಳು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.
ಚಲಿಸುತ್ತಿದ್ದಾಗಲೇ ಮರ ಮುರಿದು ಬಿದ್ದ ಕಾರಣ ಕಾರು ಜಖಂಗೊಂಡಿದೆ. ಘಟನೆಯಿಂದ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದೆ.
ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ. ಹಾಗೂ ವಿದ್ಯುತ್ ತಂತಿಗಳು ಕಡಿದು ಬಿದ್ದಿವೆ. ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಸಂಚಾರಕ್ಕೆ ಅಡಚಣೆಯಾಗಿದ್ದ ಮರವನ್ನು ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.