ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

Team Udayavani, May 22, 2024, 3:33 PM IST

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಬೆಂಗಳೂರು/ಚೆನ್ನೈ: ಒಬ್ಬ ಶ್ರೇಷ್ಠ ವ್ಯಕ್ತಿಯ ಜೀವನಗಾಥೆಯ ಕುರಿತು ಕೃತಿ ಅಥವಾ ಸಿನಿಮಾಗಳು ಬರುವುದು ಹೊಸದೇನಲ್ಲ. ಚಿತ್ರರಂಗದಲ್ಲಿ ಕೆಲ ಬಯೋಪಿಕ್‌ ಸೂಪರ್‌ ಹಿಟ್‌ ಆಗಿದೆ. ಶ್ರೇಷ್ಠ ವ್ಯಕ್ತಿಯ ಜೀವನದ ಸವಾಲು, ಸಾಧನೆ ಹಾಗೂ ಸಂಕಷ್ಟವನ್ನು ದೊಡ್ಡ ಪರದೆಯಲ್ಲಿ ದೃಶ್ಯ ರೂಪದಲ್ಲಿ ತರುವ ಪ್ರಯತ್ನ ಚಿತ್ರರಂಗ ಆಗುತ್ತಿರುತ್ತದೆ.

ಇತ್ತೀಚೆಗಷ್ಟೇ ಸಂಗೀತ ದಿಗ್ಗಜ ಇಳಯರಾಜ ಬಯೋಪಿಕ್‌ ಅನೌನ್ಸ್‌ ಆಗಿದೆ. ಇದರಲ್ಲಿ ನಟ ಧನುಷ್‌ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಪ್ರಧಾನಿ ಮೋದಿ ಅವರ ಬಯೋಪಿಕ್‌ ಸೆಟ್ಟೇರಲಿದೆ ಎನ್ನುವ ಸುದ್ದಿಯೊಂದು ದಕ್ಷಿಣ ಸಿನಿರಂಗದಲ್ಲಿ ಹರಿದಾಡಿದೆ. ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರದಲ್ಲಿ ಸತ್ಯರಾಜ್‌ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದೀಗ ಮತ್ತೊಂದು ಬಯೋಪಿಕ್‌ ಬಗ್ಗೆ ಸುದ್ದಿ ಹರಿದಾಡಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಎಂ.ಎಸ್.‌ ಸುಬ್ಬುಲಕ್ಷ್ಮಿ ಅವರ ಜೀವನಗಾಥೆಯ ಕಥೆ ಸಿನಿಮಾವಾಗಿ ಬರಲಿದೆ.

ಬೆಂಗಳೂರು ಮೂಲದ ಪ್ರೊಡಕ್ಷನ್ ಹೌಸ್ ಮತ್ತು ಪ್ರಸಿದ್ಧ ನಿರ್ದೇಶಕರ ತಂಡವು ಈಗಾಗಲೇ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಈ ಹಿಂದೆಯೇ ಎಂ.ಎಸ್.‌ ಸುಬ್ಬುಲಕ್ಷ್ಮಿ ಅವರ ಕುರಿತಾದ ಸಿನಿಮಾ ಬರಲಿದೆ ಎನ್ನುವ ಮಾತುಗಳು ಹರಿದಾಡಿತ್ತು. ಆದರೆ ಅದರ ಬಗ್ಗೆ ಮತ್ಯಾವ ಅಪ್ಡೇಟ್ಸ್‌ ಹೊರಬಿದ್ದಿರಲಿಲ್ಲ.

ಇದೀಗ ಚಿತ್ರತಂಡ ಸುಬ್ಬುಲಕ್ಷ್ಮಿ ಅವರ ಪಾತ್ರವನ್ನು ಮಾಡುವ ಕಲಾವಿದರ ಹುಡುಕಾಟದಲ್ಲಿ ನಿರತರಾಗಿದೆ. ದಕ್ಷಿಣ ಭಾರತದಲ್ಲಿ ಸದ್ಯ ಯಶಸ್ಸಿನ ಹಾದಿಯಲ್ಲಿರುವ ನಟಿ ನಯನತಾರಾ, ತ್ರಿಶಾ ಕೃಷ್ಣನ್ ಮತ್ತು ರಶ್ಮಿಕಾ ಮಂದಣ್ಣ ಅವರ ಹೆಸರು ಮುಂಚೂಣಿಯಲ್ಲಿದೆ. ಇದಲ್ಲದೆ ʼಮಹಾನಟಿʼ ಪಾತ್ರವನ್ನು ಮಾಡಿರುವ ಕೀರ್ತಿ ಸುರೇಶ್‌ ಕೂಡ ಸುಬ್ಬುಲಕ್ಷ್ಮಿ ಅವರ ಪಾತ್ರವನ್ನು ಮಾಡುವ ಲಿಸ್ಟ್‌ ನಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕ್ರಿಪ್ಟ್ ಕೆಲಸ ಅಂತಿಮ ಹಂತದಲ್ಲಿದೆ. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವುದನ್ನು ಚಿತ್ರತಂಡ ನಿರ್ಧರಿಸಲಿದೆ. ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಯೋಜಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಆದರೆ ಪ್ರೂಡಕ್ಷನ್‌ ಸಂಸ್ಥೆ ಇನ್ನಷ್ಟೇ ಅಧಿಕೃತವಾಗಿ ಚಿತ್ರದ ಬಗ್ಗೆ ಮಾಹಿತಿ ನೀಡಿಬೇಕಿದೆ.

ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ ಅವರು ಎಂ.ಎಸ್.ಸುಬ್ಬುಲಕ್ಷ್ಮಿ ಎಂದೇ ಖ್ಯಾತಿ ಆದವರು. ಶಾಸ್ತ್ರೀಯ ಸಂಗೀತ ಗಾಯಕಿ ಮತ್ತು ನಟಿಯೂ ಆಗಿಯೂ ಗುರುತಿಸಿಕೊಂಡಿದ್ದ ಅವರು 10ನೇ ವಯಸ್ಸಿನಲ್ಲೇ ಗಾಯನಕ್ಕೆ ಕಾಲಿಟ್ಟಿದ್ದರು.

1938 ರಲ್ಲಿ ʼಸೇವಾಸದನ್ʼ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ʼಸಾವಿತ್ರಿʼ ಮತ್ತು ʼಮೀರಾʼ ಸಿನಿಮಾದಲ್ಲಿ ನಟಿಸಿದ್ದರು.

ʼಸುಪ್ರಭಾತಂʼ, ʼಕುರೈ ಒನ್ರುಮ್ ಇಲ್ಲೈʼ, ʼಭಜಗೋವಿಂದಂʼ, ʼವಿಷ್ಣು ಸಹಸ್ರನಾಮʼ, ʼಹನುಮಾನ್ ಚಾಲೀಸಾʼ, ಹಾಗೂ ಇತರೆ ಪ್ರಮುಖ ಭಕ್ತಿಗೀತೆಗಳನ್ನು ಹಾಡಿದ್ದರು.

‘ಭಾರತರತ್ನ’ವನ್ನು ಶಾಸ್ತ್ರೀಯ ಸಂಗೀತಕ್ಕೆ ಮೊದಲಾಗಿ ಪಡೆದವರು ಸುಬ್ಬುಲಕ್ಷ್ಮಿ.  2004 ರಲ್ಲಿ ತನ್ನ 88ನೇ ವಯಸ್ಸಿನಲ್ಲಿ ಅವರು ನಿಧನರಾದರು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.