ಈ ಬಾರಿ ಆನ್‌ಲೈನ್‌ ಬದಲು ಆಫ್ ಲೈನ್ ನಲ್ಲಿ ಡಿಸಿಇಟಿ ಪರೀಕ್ಷೆ: ಕೆಇಎ


Team Udayavani, May 23, 2024, 6:45 AM IST

ಈ ಬಾರಿ ಆನ್‌ಲೈನ್‌ ಬದಲು ಆಫ್ ಲೈನ್ ನಲ್ಲಿ ಡಿಸಿಇಟಿ ಪರೀಕ್ಷೆ: ಕೆಇಎ

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲ್ಯಾಟರಲ್‌ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಕೋರ್ಸ್‌ ಪ್ರವೇಶಕ್ಕೆ ಜೂನ್‌ 22ಕ್ಕೆ ನಿಗದಿಯಾಗಿರುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 ಆನ್‌ಲೈನ್‌ ಬದಲು ಆಫ್ಲೈನ್‌ ಮಾದರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಈ ಪರೀಕ್ಷೆ (ಡಿಸಿಇಟಿ-2024)ಯನ್ನು ಆನ್‌ಲೈನ್‌ ಮೂಲಕ ನಡೆಸಲಾಗುವುದೆಂದು ಈ ಮೊದಲುತಿಳಿಸಲಾಗಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್ ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಒಎಂಆರ್‌ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

12 ಜಿಲ್ಲೆಗಳಲ್ಲಿ ಮಾತ್ರ ಪರೀಕ್ಷೆ
ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆ ಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆ ಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆ ಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಈ ಮೇಲಿನ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆ ಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್‌ ಮೂಲಕ ಮೇ 24ರ ಬೆ. 11ರಿಂದ 27ರ ರಾತ್ರಿ 11.59ರ ಒಳಗೆ ಬದಲಿ ಪರೀಕ್ಷಾ ಜಿಲ್ಲೆ ಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.