Theft: 3.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, May 23, 2024, 8:49 PM IST
ಮಂಗಳೂರು: ನಗರದ ಜಪ್ಪು ಬಪ್ಪಾಲ್ ನಿವಾಸಿ ಸೀಮಾ ಎಂಬವರಿಗೆ ಸೇರಿದ ವಿವಿಧ ನಮೂನೆಯ 50 ಗ್ರಾಂ ತೂಕದ 3.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ.
ಸೀಮಾ ಅವರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ತಾಯಿ ಮನೆಯಿಂದ ವ್ಯಾನಿಟಿ ಬ್ಯಾಗ್ನಲ್ಲಿ ಚಿನ್ನಾಭರಣಗಳು ಇದ್ದ ಬಾಕ್ಸ್ ಇಟ್ಟುಕೊಂಡು ಮೇ 22ರಂದು ಬೆಳಗ್ಗೆ 6.52ಕ್ಕೆ ಮಂಗಳೂರಿಗೆ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಮಂಗಳೂರಿಗೆ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ಇಳಿದಿದ್ದಾರೆ.
ಬಳಿಕ ತನ್ನ ಗಂಡನ ಕಾರಿನಲ್ಲಿ ಅಲ್ಲಿಂದ ದೇರೆಬೈಲು ಪ್ರಶಾಂತನಗರದಲ್ಲಿರುವ ಸಂಬಂಧಿಕರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿದ್ದಾರೆ.
ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ನೋಡಿದಾಗ ಬ್ಯಾಗ್ನಲ್ಲಿ ಬಾಕ್ಸ್ ಇರಲಿಲ್ಲ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.