Prajwal Revanna: ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿಗೆ ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ
Team Udayavani, May 24, 2024, 7:05 AM IST
ಕಲಬುರಗಿ: ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರಕ್ರಿಯೆ ಇದೆ. ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್ ಇದನ್ನು ಬಿಜೆಪಿ ಮೇಲೆ ಹಾಕಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ನ್ಯಾಯಾಲಯದಲ್ಲಿ ಫೈಲ್ ಮಾಡಲಾಗಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತತ್‌ಕ್ಷಣ ಪಾಸ್‌ಪೋರ್ಟ್ ರದ್ದು ಆಗಬೇಕು ಎಂದೇನಿಲ್ಲ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಅಲ್ಲಿ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅತ್ಯಂತ ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದರೆ ಕಠಿನ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲ. ರಾಜ್ಯ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಲು ಹೊರಟಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.