Hubli:ಬಸ್ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ
Team Udayavani, May 25, 2024, 11:29 AM IST
ಹುಬ್ಬಳ್ಳಿ: ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ. ಬಸ್ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್.ಅನಿತಾ ಅಮಾನತಾದವರು. ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಶಿಲ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.
ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಯಾವುದೇ ದೂರು ದಾಖಲು ಮಾಡಿಲ್ಲ. ಇನ್ನೂ ಈ ವಿಡಿಯೋ ಕುರಿತು ಚಾಲನಾ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆದಾಗ ತಾವು ಮನರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ವರದಿ ಆಧಾರದ ಮೇಲೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಚಾಲಕ-ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಇಬ್ಬರನ್ನು ಅಮಾನತು ಮಾಡಲಾಗಿದೆ. -ಶಶಿಧರ ಚನ್ನಪ್ಪಗೌಡರ, ವಿಭಾಗೀಯ ನಿಯಂತ್ರಣಾಧಿಕಾರಿ, ಧಾರವಾಡ ವಿಭಾಗ
-ಉದಯವಾಣಿ ಸಮಾಚಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.