Satish Jarakiholi: “ಪರಿಷತ್ ಟಿಕೆಟ್: ಪ್ರಾಂತ, ಜಾತಿವಾರು ಪ್ರಾತಿನಿಧ್ಯ ನೀಡಿ”
Team Udayavani, May 26, 2024, 6:45 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ಜೂ.13 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಎರಡು ದಿನಗಳ ಹಿಂದೆಯಷ್ಟೇ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಸಚಿವರಿಗೆ ರಾತ್ರಿ ಭೋಜನದ ವ್ಯವಸ್ಥೆ ಮಾಡಿ, ಲೋಕಸಭೆ ಚುನಾವಣೆಯ “ಕ್ಷೇತ್ರ ಭವಿಷ್ಯ’ದ ವಿಚಾರ ಚರ್ಚಿಸಲಾಗಿತ್ತು.
ಇದೀಗ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಶನಿವಾರ ಸೇರಿದ್ದ ಕೆಲ ಸಚಿವರು ಮತ್ತು ಶಾಸಕರು ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬ್ರೇಕ್‌ಫಾಸ್ಟ್ ಎಲ್ಲ ಏನಿಲ್ಲ. ಹಾಗೆ ಬಂದೆವು. ವಿಧಾನಪರಿಷತ್ ಚುನಾವಣೆ ವಿಚಾರವಾಗಿ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.
ಪ್ರಾಂತವಾರು, ಜಾತಿವಾರು ಪ್ರಾತಿನಿಧ್ಯ ಕೇಳಿದ್ದೇವೆ: ಪಕ್ಷಕ್ಕಾಗಿ ಕೆಲಸ ಮಾಡಿದ ಬಹಳಷ್ಟು ಜನರಿದ್ದಾರೆ. ಅವರಿಗೆಲ್ಲಾ ಅವಕಾಶ ಸಿಗಬೇಕು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮೈಸೂರು, ಮಂಗಳೂರು ಹೀಗೆ ಪ್ರಾಂತವಾರು ಅವಕಾಶ ಕೊಡಬೇಕು. ವಿಧಾನಪರಿಷತ್ ಸದಸ್ಯತ್ವ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೆಲ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ನಮಗೆ ಯಾರು ಹೆಚ್ಚು ಮತ ಹಾಕುತ್ತಾರೋ ಅಂತಹ ಸಮುದಾಯವನ್ನು ಗುರುತಿಸಿ ಕೊಡಬೇಕು. ಅದನ್ನು ಸಿಎಂ, ಡಿಸಿಎಂ-ಅಧ್ಯಕ್ಷರು, ಹೈಕಮಾಂಡ್ ನಾಯಕರಿಗೂ ಹೇಳಿದ್ದೇವೆ. ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಯತೀಂದ್ರಗೆ ಸಿಕ್ಕೇ ಸಿಗುತ್ತದೆ:
ಸರ್ಕಾರ ರಚನೆ ಸಂದರ್ಭದಲ್ಲಿ ಯತೀಂದ್ರ ಬಗ್ಗೆ ಮಾತುಕತೆ ಆಗಿತ್ತು. ಅವರಿಗೆ ಸಿಕ್ಕೇ ಸಿಗುತ್ತದೆ. ಅದರಲ್ಲೇನೂ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕೆಲವರಿಗೆ ಮತ್ತೂಮ್ಮೆ ಅವಕಾಶ ಕೊಡಬೇಕಾಗಬಹುದು. ಅದು ಅನಿವಾರ್ಯ ಕೂಡ. ಆದರೂ ಹೊಸಬರಿಗೆ ಕೊಡಬೇಕು. ಪಕ್ಷ ಕಟ್ಟಬೇಕು. ಸಮುದಾಯಗಳು ಪ್ರಮುಖ ಪಾತ್ರ ವಹಿಸಿರುತ್ತವೆ. ಅವುಗಳಿಗೆ ಅವಕಾಶ ಸಿಗಬೇಕಲ್ಲವೇ? ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಅವಕಾಶ ಸಿಕ್ಕಿಲ್ಲ. ಅಲ್ಪಸಂಖ್ಯಾತರಿಗೆ ಕಡ್ಡಾಯವಾಗಿ ಕೊಡಬೇಕು. ಅದನ್ನು ಬೆಂಗಳೂರು ಬಿಟ್ಟು ಹೊರಗಿನವರಿಗೆ ಕೊಡಬೇಕು ಎಂದಿದ್ದೇವೆ. ಲಂಬಾಣಿ ಸಮುದಾಯಯಲ್ಲಿ ಪ್ರಬಲವಾಗಿ ನಾಲ್ಕೈದು ಆಕಾಂಕ್ಷಿಗಳಿದ್ದಾರೆ. ಅವರಲ್ಲೂ ಒಬ್ಬರಿಗೆ ಕೊಡಬೇಕು ಎಂದು ಕೇಳಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.