BJP ಧರ್ಮಾಧರಿತವಾಗಿ ಪ್ರಚಾರ ಮಾಡಿಲ್ಲ: ಅಮಿತ್ ಶಾ ಹೇಳಿದ್ದೇನು?
Team Udayavani, May 27, 2024, 6:49 AM IST
ಹೊಸದಿಲ್ಲಿ: ಬಿಜೆಪಿ ಯಾವುದೇ ರಾಜ್ಯದಲ್ಲಿ ಧರ್ಮಾಧರಿತವಾಗಿ ಚುನಾವಣ ಪ್ರಚಾರವನ್ನು ಮಾಡಿಲ್ಲ. ತಮ್ಮ ಸೋಲನ್ನು ಮುಚ್ಚಿಕೊಳ್ಳಲು ವಿಪಕ್ಷಗಳು ಚುನಾವಣ ಆಯೋಗದ ಸೂಚನೆಯನ್ನು ಬಿಜೆಪಿ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನಲ್ಲಿ ಮಾತನಾಡಿರುವ ಅವರು, ಮುಸ್ಲಿಮರಿಗೆ ಮೀಸಲಾತಿ ನೀಡುವುದರ ವಿರುದ್ಧ, 370ನೇ ವಿಧಿ ರದ್ದತಿಯ ಪರ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವ ಬಗ್ಗೆ ಬಿಜೆಪಿ ಮಾತನಾಡಿದೆ. ಇದನ್ನೇ ನೀವು ಧರ್ಮಾಧಾರಿತ ಎಂದು ಕರೆಯುವುದಾದರೆ, ಬಿಜೆಪಿ ಇದನ್ನು ಮಾಡಿದೆ ಮತ್ತು ಇದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.
2-3 ವರ್ಷಗಳಲ್ಲಿ ನಕ್ಸಲಿಸಂ ನಿರ್ಮೂಲನೆ: ದೇಶದಲ್ಲಿ ಮುಂದಿನ 2-3 ವರ್ಷಗಳಲ್ಲಿ ನಕ್ಸಲಿಸಂ ಸಂಪೂರ್ಣ ವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಹಿಂದೆ ಪಶುಪತಿನಾಥದಿಂದ ತಿರುಪತಿವರೆಗೂ ನಕ್ಸಲ್ ಕಾರಿಡಾರ್ ಎನ್ನಲಾಗುತ್ತಿತ್ತು. ಆದರೆ ಇದನ್ನು ಈಗ ಸಂಪೂರ್ಣವಾಗಿ ಇಲ್ಲವಾಗಿಸಲಾಗಿದೆ. ಝಾರ್ಖಂಡ್ ಪೂರ್ಣವಾಗಿ ನಕ್ಸಲ್ ಮುಕ್ತವಾಗಿದೆ. ಛತ್ತೀಸ್‌ಗಢದಲ್ಲಿ ನಕ್ಸಲರಿದ್ದಾರೆ. ಇಲ್ಲಿ ಕಾಂಗ್ರೆಸ್ ಆಡಳಿತವಿದ್ದ ಕಾರಣ ಇದನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ ಎಂದರು.
ಶಾ ಹೇಳಿದ್ದೇನು?
ಜಮ್ಮು- ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವುದು ನಮ್ಮ ಆದ್ಯತೆ
3ನೇ ಅವಧಿಯಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡುತ್ತೇವೆ.
ಸಮಾನ ನಾಗರಿಕ ಸಂಹಿತೆ ಜಾರಿಯೂ ನಮ್ಮ ಸರಕಾರದ ಆದ್ಯತೆ
ಸೋಲು ಮುಚ್ಚಿಟ್ಟುಕೊಳ್ಳಲು ಚುನಾವಣ ಆಯೋಗದ ಹೇಳಿಕೆ ಬಳಕೆ ಮಾಡುವ ವಿಪಕ್ಷಗಳು
ಕಾಶ್ಮೀರ ಚುನಾವಣೆ, ಮೋದಿ ಪಾಲಿಸಿ
ಮೋದಿ 3ನೇ ಅವಧಿಗೆ ಪ್ರಧಾನಿಯಾದರೆ ಜಮ್ಮು-ಕಾಶ್ಮೀ ರದಲ್ಲಿ ಚುನಾವಣೆ ನಡೆಸುವುದು ಆದ್ಯತೆಯಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆ ಬಳಿಕ ಅದಕ್ಕೆ ರಾಜ್ಯದ ಸ್ಥಾನಮಾನ ದೊರಕಿಸು ವುದಾಗಿ ಸಂಸತ್ತಿನಲ್ಲೇ ನಾನು ಹೇಳಿದ್ದೆ. ಇದೀಗ ಕ್ಷೇತ್ರ ಪುನ ರ್ವಿಂಗಡನೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಒಂದು ದೇಶ ಒಂದು ಚುನಾವಣೆ: ಮೋದಿ ಸರಕಾರದ ಮುಂದಿನ ಅವಧಿಯಲ್ಲಿ ಒಂದು ದೇಶ ಒಂದು ಚುನಾವಣೆ ನೀತಿಯನ್ನು ಜಾರಿ ಮಾಡಲಾಗುತ್ತದೆ. ಏಕ ಕಾಲ ದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾ ವಣೆ ಗಳು ನಡೆಯುವುದರಿಂದ ಖರ್ಚು ಉಳಿತಾಯವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಹುಲ್ ವಿದೇಶಕ್ಕೆ ಹೋದರೆ, ಮೋದಿ ಸೈನಿಕರೊಟ್ಟಿಗೆ
ಸಾಸಾರಾಂ: ಪ್ರಸ್ತುತ ನಡೆಯುತ್ತಿರುವ ಚುನಾವಣೆ ರಜೆ ಬಂದರೆ ವಿದೇಶಕ್ಕೆ ಓಡಿಹೋಗುವ ರಾಹುಲ್ ಗಾಂಧಿ ಹಾಗೂ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಹೋರಾಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬಿಹಾರದ ಸಾಸಾರಾಂನಲ್ಲಿ ರವಿವಾರ ನಡೆದ ಚುನಾವಣ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಬಾಯಲ್ಲಿ ಬೆಳ್ಳಿ ಚಮಚ ಇಟ್ಟುಕೊಂಡು ಹುಟ್ಟಿದವರು. ಆದರೆ ಮೋದಿ ಹಾಗಲ್ಲ. ಅವರು ಕಷ್ಟುಪಟ್ಟು ಮೇಲೇರಿದ್ದಾರೆ. ಅವರು ಹಿಂದುಳಿದ ವರ್ಗದ ಕುಟುಂಬದಿಂದ ಬಂದಿದ್ದಾರೆ. ಆದರೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಜೆ ಸಿಕ್ಕ ಕೂಡಲೇ ವಿದೇಶಗಳಿಗೆ ಓಡಿ ಹೋಗುತ್ತಾರೆ ಎಂದು ಅವರು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಾಕಿಸ್ಥಾನದ ಬಳಿ ಇರುವ ಅಣ್ವಸ್ತ್ರಗಳಿಗೆ ಹೆದರಿಕೊಳ್ಳುತ್ತಿದೆ. ಆದರೆ ನಮ್ಮ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಿದ್ದ 370ನೇ ವಿಧಿಯನ್ನು ರದ್ದು ಮಾಡಿದ್ದಲ್ಲದೇ, ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ದೇಶಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಇದೇ ವೇಳೆ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.