Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ
Team Udayavani, May 28, 2024, 12:44 AM IST
ರಾಂಚಿ: ಝಾರ್ಖಂಡ್ನ ರಾಂಚಿಯ ಬಾರ್ ಒಂದರಲ್ಲಿ ಮದ್ಯ ಒದಗಿಸದ ಕಾರಣ ಡಿಜೆ ಆಪರೇಟರ್ನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಜಾಲತಾಣದಲ್ಲಿ ವೈರಲ್ ಆಗಿದೆ. ಗುಂಡು ಹಾರಿಸಿದ ಆರೋಪಿ ಸೇರಿದಂತೆ ನಾಲ್ವರು ರವಿವಾರ ತಡರಾತ್ರಿ ಬಾರ್ಗೆ ಬಂದಿದ್ದರು.
ಬಾರ್ ಬಂದ್ ಆದ ಕಾರಣ ಅವರಿಗೆ ಮದ್ಯ ಸಿಗಲಿಲ್ಲ. ಈ ಕಾರಣಕ್ಕೆ ಆರೋಪಿ ಬಾರ್ನಲ್ಲಿದ್ದ ಡಿಜೆ ಆಪರೇಟರ್ನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದು, ಪರಾರಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ಸಂದೀಪ್ ಪ್ರಮಾಣಿಕ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಗಯಾದಲ್ಲಿ ಬಂಧಿಸಿದ್ದು, ರಾಂಚಿಗೆ ಕರೆತರಲಾಗಿದೆ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.